ಬೆಂಗಳೂರು:ಶಕ್ತಿಯೋಜನೆ ಜಾರಿಗೆ ಬಂದು ಮೂರು ವಾರಗಳು ಕಳೆದಿದ್ದು, ಈವರೆಗೂ10.54 ಕೋಟಿ ಮಹಿಳೆಯರು ಇದರ ಉಪಯೋಗ ಪಡೆದುಕೊಂಡಿದ್ದು, ಮಹಿಳೆಯರ ಟಿಕೆಟ್‌ಗೆ 248.30 ಕೋಟಿ ರೂ. ವೆಚ್ಚವಾಗಿದೆ.
ಶಕ್ತಿ ಯೋಜನೆಗೆ ಜೂನ್​.11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸೌಧದ ಮುಂದೆ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ವಿತರಿಸುವ ಮೂಲಕ ಚಾಲನೆ ನೀಡಿದರು. ಜೂನ್​.11 ರಿಂದ ಜುಲೈ 2 ವರೆಗೆ 10,54,45,047 ಮಹಿಳೆಯರು ಪ್ರಯಾಣ ಮಾಡಿದ್ದು, ಇದಕ್ಕೆ 248,30,13,266 ಕೋಟಿ ರೂ. ಟಿಕೆಟ್ ವೆಚ್ಚವಾಗಿದೆ.
ಶಕ್ತಿ ಯೋಜನೆ ಜಾರಿ ನಂತರ ರಾಜ್ಯದ ನಾಲ್ಕೂ ನಿಗಮಗಳ ಬಸ್‌ನಲ್ಲಿ ಪ್ರಯಾಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಶಕ್ತಿ ಯೋನೆಗೂ ಮುನ್ನ ನಿತ್ಯ ಸರಾಸರಿ 84.91 ಲಕ್ಷ ಜನರು ಪ್ರಯಾಣಿಸುತ್ತಿದ್ದರು. ಆದರೀಗ ಸರಾಸರಿ 1.09 ಕೋಟಿ ಜನರು ಸಂಚರಿಸುತ್ತಿದ್ದಾರೆ. ಆದಾಯದಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.
ಯೋಜನೆ ಜಾರಿಗೂ ಮುನ್ನ ಪ್ರತಿದಿನ ಸರಾಸರಿ 24.48 ಕೋಟಿ ರೂ. ಆದಾಯ ಬರತ್ತಿತ್ತು. ಈಗ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯವೂ ಸೇರಿ ನಿತ್ಯ ಸರಾಸರಿ 28.89 ಕೋಟಿ ರೂ. ಬರುತ್ತಿದ್ದು, ಒಟ್ಟಾರೆ 4.41 ಕೋಟಿ ರೂ. ಆದಾಯ ಹೆಚ್ಚಾಗುವಂತಾಗಿದೆ.
ಇದನ್ನೂ ಓದಿ:ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ನಟ ಧನುಷ್​; ಹೊಸ ಲುಕ್​ ವೈರಲ್​
ಶಕ್ತಿ ಯೋಜನೆಯಿಂದಾಗಿ ನಾಲ್ಕು ನಿಗಮದ ಬಸ್‌ಗಳಲ್ಲಿ ಮಹಿಳೆಯರಿಂದ ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಕೂಎಲು ಸೀಟ್‌ಗಳಿಲ್ಲದೇ ಮತ್ತು ನಿಲ್ಲಲು ಸ್ಥಳವಿಲ್ಲದೆ ಪರದಾಡುತ್ತಿದ್ದಾರೆ. ಗದಗ ಸೇರಿ ಕೆಲವೆಡೆ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮತ್ತೊಂದೆಡೆ ಶಕ್ತಿಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಬಾಲಕಿಯರಿಗೆ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು, ಇದರ ದುರ್ಬಳಕೆ ಮಾಡಿಕೊಂಡ ಅಪ್ರಾಪ್ತ ಬಾಲಕಿಯರಿಬ್ಬರು ಕೆಎಸ್‌ಆರ್‌ಟಿಸಿ ಬಸ್ ಹತ್ತಿ ನೇರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರು. ನಂತರ ಠಾಣೆಯಲ್ಲಿ ನಾಪತ್ತೆ ದಾಖಲಾಗಿತ್ತು ತನಿಖೆಯ ವೇಳೆ ಚಾಕೋಲೇಟ್ ಖರೀದಿಸಿದಕ್ಕೆ ಅಪ್ಪ ಬೈದರು ಎಂದು ಇಬ್ಬರು ಬಾಲಕಿಯರು ಉಚಿತ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋಗಿರುವುದು ಪತ್ತೆಯಾಗಿತ್ತು.
ಈ ಘಟನೆಯ ನಂತರ ಚೈಲ್ಡ್ ರೈಟ್ಸ್ ಟ್ರಸ್ಟ್‌ನ ನಿರ್ದೇಶಕ ನಾಗಸಿಂಹ ಜಿ.ರಾವ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಅಪ್ರಾಪ್ತ ಬಾಲಕಿಯರ ಪ್ರಯಾಣದ ಸಮಯದಲ್ಲಿ ಪಾಲಕರ ಒಪ್ಪಿಗೆ ಪತ್ರವನ್ನು ಕಡ್ಡಾಯಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 14 =
Remember me
