ಬೆಂಗಳೂರು:ಬೆಂಗಳೂರಿನ ಟೆಕ್ ಕಾರಿಡಾರ್ ಎಂದೇ ಜನಪ್ರಿಯ ಅಗಿರುವ ಮಾರತ್‌ಹಳ್ಳಿ, ಹಾಗೂ ವೈಟ್ ಫೀಲ್ಡ್‌ನ ಸಮೀಪವಿರುವ ಕುಂದಲಹಳ್ಳಿ ಸಮೀಪ ಹೋಟೆಲ್​ ಒಂದರಲ್ಲಿ ಸ್ಫೋಟಗೊಂಡು ಮೂವರು ಸಿಬ್ಬಂದಿ ಸೇರಿ ಐದು ಜನರು ಗಂಭೀರ ಗಾಯಗೊಂಡಿರುವ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮಹಿಳೆಯರಿಗೆ ರೆಡ್‌ ಬಾಲ್ ಕ್ರಿಕೆಟ್‌ ಟೂರ್ನಿ ನಡೆಸಲು ಬಿಸಿಸಿಐ ಐತಿಹಾಸಿಕ ನಿರ್ಧಾರ!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಟೀಟ್​ ಮಾಡಿರುವ ವಿಜಯೇಂದ್ರ ರಾಜ್ಯ ಕಾಂಗ್ರೆಸ್​ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ.
ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ…pic.twitter.com/kuBi5kjgWU
— Vijayendra Yediyurappa (@BYVijayendra)March 1, 2024

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಿಡಿಕಾಡಿದ್ದಾರೆ.
ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಟಿಸಿದೆ ಎಂದು ಟೀಕಿಸಿದ್ದಾರೆ.
ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಅವರು ಸಹ ಸುಧಾರಿತ ಸ್ಫೋಟಕ ಬ್ಲಾಸ್ಟ್ ಆಗಿರೋದನ್ನು ಖಚಿತಪಡಿಸಿದ್ದಾರೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.
ಕಾಂಗ್ರೆಸ್ ಹಿಂದೂ ವಿರೋಧಿ ಏಕೆ? ಶಾಸಕ ಯತ್ನಾಳ್ ನೀಡಿದ ಪ್ರಮುಖ ಕಾರಣಗಳಿವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
