ಬೆಂಗಳೂರು : ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.
ಜಯಲಲಿತಾ ಜೆ. ದೀಪಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆಯನ್ನು ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿದೆ.
ಜಯಲಲಿತಾ ಪ್ರಕರಣದ ವಿಚಾರಣಾ ವೆಚ್ಚವಾಗಿ ಕರ್ನಾಟಕಕ್ಕೆ ತಮಿಳುನಾಡು ಸರ್ಕಾರ 5 ಕೋಟಿ ರೂ. ನೀಡಬೇಕು ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಈ ಆದೇಶಕ್ಕೂ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಸ್ತುತ ಅರ್ಜಿ ಚಿನ್ನಾಭರಣ ಹಸ್ತಾಂತರ ಕುರಿತಾಗಿದ್ದು, 5 ಕೋಟಿ ರೂ. ಬಿಡುಗಡೆಗೆ ತಡೆ ನೀಡುವ ಕುರಿತಂತೆ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + fourteen =
Remember me
