ಬೆಂಗಳೂರು:ರಾಜಭವನವನ್ನು ಅತಿ ಹೆಚ್ಚುಬಾರಿ ದುರ್ಬಳಕೆ ಮಾಡಿಕೊಂಡಿರುವ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ, ದೇಶದಲ್ಲಿ 56ಕ್ಕಿಂತಲೂ ಹೆಚ್ಚುಬಾರಿ ರಾಜಭವನವನ್ನು ದುರುಪಯೋಗ ಪಡೆಸಿಕೊಂಡು ಸರ್ಕಾರಗಳನ್ನು ಉರುಳಿಸಿದ್ದು ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜ್ಯಭವನವನ್ನು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದರು.
ಅತಿ ಹೆಚ್ಚು ವಿವಾದಾತ್ಮಕ ಹಾಗೂ ಪ್ರಶ್ನಾರ್ಹ ರಾಜ್ಯಪಾಲರಾಗಿದ್ದ ಗ್ರೇಟ್ ಹಂಸರಾಜ ಭಾರದ್ವಾಜ್ ಅವರು ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಏನೂ ಪ್ರಕರಣ ಇಲ್ಲದೇ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದರು. ಈಗ ಆ ಪ್ರಕರಣ ಬಿದ್ದುಹೋಗಿದೆ. ಕಾಂಗ್ರೆಸ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳುತ್ತದೆಯೇ ಎಂದು ಪ್ರಶ್ನಿಸಿದರು.
ದೇಶದಲ್ಲಿ ಸುಮಾರು 56 ಕ್ಕಿಂತಲೂ ಹೆಚ್ಚುಬಾರಿ ರಾಜಭವನ ದುರುಪಯೋಗ ಮಾಡಿಕೊಂಡು ಕೇರಳ ಸೇರಿದಂತೆ ಅನೇಕ ಸರ್ಕಾರಗಳನ್ನು ಉರುಳಿಸಿರುವ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ. ಅವರೇನು ನಮಗೆ ಪಾಠ ಹೇಳುವುದು ಎಂದು ಖಾರವಾಗಿ ಉತ್ತರಿಸಿದರು.
ಹಿಂದಿನ ಸರ್ಕಾರದಲ್ಲಿ ನಡೆದ ಹಗರಣಗಳನ್ನು ಬಹಿರಂಗ ಪಡೆಸುವುದಾಗಿ ಹೇಳುವ ಬದಲು ತನಿಖೆಗೆ ಅಡ್ಡಿಪಡಿಸಿದವರು ಯಾರು ?  ಅವರ ಕೈಯ್ಯಲ್ಲೇ ಆಡಳಿತವಿದೆ. 15 ತಿಂಗಳಿಂದ ಸುಮ್ಮನಿದಿದ್ದೇಕೆ ? ಯಾವುದೇ ತನಿಖೆ ನಡೆಸಲಿ ಎಂದು ಬೊಮ್ಮಾಯಿ ಸವಾಲು ಹಾಕಿದರು.
ಯಾದಗಿರಿ ಪಿಎಸ್‌ಐ ಸಾವಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಆರಂಭವಾಗಿದೆ. ಅಭಿವೃದ್ಧಿಯಲ್ಲಿ ನಯಾಪೈಸೆ ಕೊಡುತ್ತಿಲ್ಲ. ಶಾಸಕರೆಲ್ಲ ಗಂಟು ಬಿದ್ದಿದ್ದಾರೆ. ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ನಾಯಕರೆಲ್ಲ ವರ್ಗಾವಣೆಯಲ್ಲಿಯೇ ದುಡ್ಡು ಮಾಡುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ನೀಡಿದ್ದಾರೆ. ಅದರಡಿಯಲ್ಲಿ ವರ್ಗಾವಣೆಗಳು ನಡೆಯುತ್ತಿವೆ. ವಿಪರೀತ ಹಣ ಕೇಳುವುದರಿಂದ ಇಡೀ ನೌಕರರ ಸಮೂಹ ಒತ್ತಡದಲ್ಲಿದೆ. ಸಾವಿಗೀಡಾದವರಷ್ಟೇ ಅಲ್ಲ. ಬಹಳ ಜನ ತೀವ್ರ ಒತ್ತಡದಲ್ಲಿದ್ದಾರೆ. ಅವರು ಹಣ ಕೊಡಲು ಆಗುವುದಿಲ್ಲ. ಹಣ  ಕೊಟ್ಟವರು ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಭ್ರಷ್ಟಾಚಾರವನ್ನು ಮೇಲಿನಿಂದ ಕೆಳಗೆ ವ್ಯವಸ್ಥಿತವಾಗಿ ಮಾಡಿರುವುದರಿಂದ ಈ ರೀತಿಯ ಸಾವುಗಳು ನಡೆಯುತ್ತವೆ ಎಂದು ಬೊಮ್ಮಾಯಿ ವ್ಯಥೆ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
