ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮಾಜಿ ಸಚಿವ ವಿ.ಸೋಮಣ್ಣ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
ಬಿಡದಿಯ ತೋಟದ ಮನೆಯಲ್ಲಿ ಹೆಚ್‌ಡಿಕೆ ಅವರನ್ನು ಭೇಟಿ ಮಾಡಿದ ಸೋಮಣ್ಣ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಸೋಮಣ್ಣ ಎರಡನೇ ಬಾರಿಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಬುಧವಾರದ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.ಈ ಮೊದಲು ರಾಜ್ಯಸಭೆಗೆ ಒಲವು ವ್ಯಕ್ತಪಡಿಸಿದ್ದ ಸೋಮಣ್ಣ ಈಗ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡಲು ಅಪೇಕ್ಷಿಸಿದ್ದು, ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮೈತ್ರಿ ಸಂದರ್ಭದಲ್ಲಿ ತುಮಕೂರು ಕೂಡ ಜೆಡಿಎಸ್‌ನ ಆದ್ಯತಾ ಕ್ಷೇತ್ರವಾಗಿದ್ದು, ಈ ಕ್ಷೇತ್ರವನ್ನು ತಮಗೆ(ಬಿಜೆಪಿ)ಬಿಟ್ಟುಕೊಡುವಂತೆ ಕುಮಾರಸ್ವಾಮಿಗೆ ಸೋಮಣ್ಣ ಮತ್ತೆ ಮನವಿ ಮಾಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ತಮಗೆ ಸಹಕಾರ ನೀಡಬೇಕೆಂದು ಕುಮಾರಸ್ವಾಮಿ ಬಳಿ ಸೋಮಣ್ಣ ಮನವಿ ಮಾಡಿದ್ದಾರೆ. ಅಲ್ಲದೆ, ಬಿಜೆಪಿ ಹೈಕಮಾಂಡ್ ಬಳಿ ತನ್ನ ಪರ ಅಭಿಪ್ರಾಯ ವ್ಯಕ್ತಪಡಿಸುವಂತೆ ಸೋಮಣ್ಣ ಕೋರಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.ಸೋಮಣ್ಣ ಇತ್ತೀಚೆಗೆ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಈ ವೇಳೆ ರಾಜ್ಯಸಭೆ ಸ್ಥಾನ ಕೇಳಿರುವುದಾಗಿ ಹೇಳಿದ್ದರು. ಈಗ ತುಮಕೂರಿನಿಂದ ಅಭ್ಯರ್ಥಿಯಾಗಲು ಕಸರತ್ತು ನಡೆಸುತ್ತಿದ್ದಾರೆ.
ಕಾಂಗ್ರೆಸ್ ಮುದ್ದ್ದುಹನುಮೇಗೌಡಗೆ ಟಿಕೆಟ್ ನೀಡುವ ಸಾಧ್ಯತೆ ಇರುವುದರಿಂದ ಲಿಂಗಾಯತ, ಬಿಜೆಪಿ ಹಾಗೂ ಜೆಡಿಎಸ್ ಸಾಂಪ್ರದಾಯಿಕ ಮತಗಳು ತಮ್ಮ ಕೈಹಿಡಿಯಬಹುದೆಂಬ ಲೆಕ್ಕಾಚಾರದಲ್ಲಿ ಸೋಮಣ್ಣ ಅವರು ಕುಮಾರಸ್ವಾಮಿ ಭೇಟಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + five =
Remember me
