ಬೆಂಗಳೂರು:ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿದ ಮಾಜಿ ಕಾರ್ಪೋರೇಟರ್ ಸೇರಿದಂತೆ ಹಲವರ ವಿರುದ್ಧ ಯಶವಂತಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
ಈ ಕುರಿತು ಬಿ.ಕೆ.ಗೋಪಾಲಕೃಷ್ಣ ಎಂಬುವರು ದೂರು ನೀಡಿದ್ದರು. ಇದರ ಅನ್ವಯ ಪಾಲಿಕೆ ಮಾಜಿ ಸದಸ್ಯ ಜಿ.ಕೆ.ವೆಂಕಟೇಶ್ ಹಾಗೂ ಭರತ್ ಸಿಂಗ್, ಕೊತ್ತಮರಿ ನಾಗ, ಖಾಜಾ, ರತ್ನಮ್ಮ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅ.27ರಂದು ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದರು. ಸಂಜೆ 7.4ಕ್ಕೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದರು. ಅಲ್ಲದೆ, ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿ ದೌರ್ಜನ್ಯ ಎಸಗಿದರು. ಇವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಗೋಪಾಲಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇದೇ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಯಶವಂತಪುರದಲ್ಲಿ ಸಿದ್ದರಾಮಯ್ಯ, ಭಾಷಣ ಮಾಡುತ್ತಿದ್ದಾಗ ವೆಂಕಟೇಶ್ ಮತ್ತು ಸಹಚರರು ಕಾಂಗ್ರೆಸುರ ಪೊಲೀಸ್ ಠಾಣೆ ಎದುರು ತಡರಾತ್ರಿ ವರೆಗೂ ಪ್ರತಿಭಟನೆ ನಡೆಸಿ ಬಂಧನಕ್ಕೆ ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
