ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ನರ್ಸ್​ಗೆ ಫೇಸ್​ಬುಕ್​ನಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ವರ್ತೂರಿನ ರಾಮಗೋಡನಹಳ್ಳಿ ನಿವಾಸಿ 34 ವರ್ಷದ ಸಂತ್ರಸ್ತೆ. ಆರೋಪಿ ಬೀದರ್ ಮೂಲದ ದತ್ತಾತ್ರಿ ದವಲೇಗರ್ ಎಂಬಾತನ ವಿರುದ್ಧ ವರ್ತರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತೆ 12 ವರ್ಷದ ಹಿಂದೆ ಮದುವೆಯಾಗಿದ್ದು ರಾಮಗೋಡನಹಳ್ಳಿಯಲ್ಲಿ ವಾಸಿಸುತ್ತಿದ್ದಾಳೆ. ದಂಪತಿಗೆ 10 ವರ್ಷದ ಪುತ್ರನಿದ್ದಾನೆ. ವೈದ್ಯಕೀಯ ಕಂಪನಿಯೊಂದರಲ್ಲಿ ನರ್ಸ್ ಆಗಿರುವ ಆಕೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯನ್ನು ತೊರೆದು ಪ್ರತ್ಯೇಕವಾಗಿದ್ದಳು. 2018ರಲ್ಲಿ ಫೇಸ್​ಬುಕ್ ಮೂಲಕ ಸ್ನೇಹ ಬೆಳೆಸಿದ್ದ ದತ್ತಾತ್ರಿ, ಪ್ರತಿನಿತ್ಯ ಚಾಟಿಂಗ್ ಮಾಡುತ್ತಿದ್ದ. ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಫೋನ್ ನಂಬರ್ ವಿನಿಮಯ ಮಾಡಿಕೊಂಡಿದ್ದರು.
ಮದುವೆಯಾಗುವುದಾಗಿ ನಂಬಿಸಿದ್ದ ದತ್ತಾತ್ರಿ ಆಗಾಗ ಬೆಂಗಳೂರಿಗೆ ಬಂದು ಆಕೆಯನ್ನು ಭೇಟಿ ಮಾಡಿ ಹೋಗುತ್ತಿದ್ದ. ಮೊಬೈಲ್ ಹಾಳಾಗಿದ್ದು ಕೊಡಿಸುವಂತೆ ಕೇಳಿದ್ದ. ಆಕೆ ಆನ್​ಲೈನ್​ನಲ್ಲಿ ಮೊಬೈಲ್ ಖರೀದಿಸಿ ಕೊಟ್ಟಿದ್ದಳು. ಮಾರ್ಚ್​ನಲ್ಲಿ ನಗರಕ್ಕೆ ಬಂದಾಗ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಬೀದರ್​ಗೆ ವಾಪಸ್ ಆಗಿದ್ದು, ಇದುವರೆಗೆ ಸಂಪರ್ಕಕ್ಕೆ ಸಿಕ್ಕಿಲ್ಲ. ತಾನು ವಂಚನೆಗೆ ಒಳಗಾಗಿರುವುದು ಅರಿವಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.
ಫೇಸ್​ಬುಕ್ ಪಾಸ್​ವರ್ಡ್ ಕೊಟ್ಟು ಕೆಟ್ಟ ಪ್ರಿಯಕರ: ಬ್ಲ್ಯಾಕ್​ಮೇಲ್​ ಶುರುಮಾಡಿದ್ಳು ಪ್ರೇಯಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eight =
Remember me
