ಬೆಂಗಳೂರು:ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಹೊಸ ನಿಯಮ ಜಾರಿಯಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಕಡೆ ಮುಖಮಾಡಿ ಕೂರುವಂತೆ ಆಸನ ವ್ಯವಸ್ಥೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ.
ಸಾಮಾನ್ಯವಾಗಿ ಎಲ್ಲ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶ ದ್ವಾರದ ಕಡೆ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುತ್ತಾರೆ. ಆದರೆ, ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯಲು ಆಸನದ ವ್ಯವಸ್ಥೆ ಮಾಡಲು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ.
ಮಂಡಳಿಯು ಪರೀಕ್ಷೆ-1ರ ಮಾರ್ಗಸೂಚಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಹಿಮ್ಮುಖವಾಗಿ ಕುಳಿತುಕೊಳ್ಳುವಂತೆ ಸೂಚನೆ ನೀಡಿದೆ. ಹಿಮ್ಮುಖವಾಗಿ ಕುಳಿತುಕೊಂಡರೆ ಕೊಠಡಿಯೊಳಗೆ ಯಾರು ಬಂದರು ಎಂಬ ಬಗ್ಗೆ ಅರಿವಿಗೆ ಬರುವುದಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೆ ಬೇಗನೆ ಪತ್ತೆ ಹಚ್ಚಲು ಸಹಕಾರಿಯಾಗಲಿದೆ ಎಂಬುದು ಶಿಕ್ಷಣ ಇಲಾಖೆಯ ಲೆಕ್ಕಾಚಾರ.
ನೆಲದ ಮೇಲೆ ಕೂರಿಸಬೇಡಿ:ಪ್ರಸಕ್ತ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನೆಲದ ಮೇಲೆ ಹಾಗೂ ಬಯಲಿನಲ್ಲಿ ಕುಳಿತು ಪರೀಕ್ಷೆ ಬರೆಯದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಪರೀಕ್ಷಾ ಕೇಂದ್ರದಲ್ಲಿ ಪೀಠೋಪಕರಣಗಳ ಕೊರತೆ ಉಂಟಾದಲ್ಲಿ ಸಂಬಂಧಿಸಿದ ಕೇಂದ್ರಕ್ಕೆ ಸಂಯೋಜಿಸಿರುವ ಶಾಲೆಗಳಿಂದ ಡೆಸ್ಕ್​ಗಳನ್ನು ಪಡೆಯುವಂತೆ ತಿಳಿಸಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು/ಉಪ ಮುಖ್ಯ ಅಧೀಕ್ಷಕರನ್ನಾಗಿ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಪ್ರೌಢಶಾಲಾ ಮುಖ್ಯ ಶಿಕ್ಷಕಕರು ಲಭ್ಯವಿಲ್ಲದಿದ್ದಲ್ಲಿ ಪ್ರಾಥಮಿಕ ಶಾಲಾ ಪದವೀಧರ ಮುಖ್ಯ ಶಿಕ್ಷಕರು/ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರನ್ನು ನೇಮಕ ಮಾಡುವಂತೆ ತಿಳಿಸಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಆಯಾ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯ ಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ಮಾಡದೆ, ಬೇರೊಂದು ಶಾಲೆಗಳ ಮುಖ್ಯ ಶಿಕ್ಷಕರನ್ನು ಅಧೀಕ್ಷಕರನ್ನಾಗಿ ನೇಮಿಸಬೇಕು ಎಂಬ ನಿರ್ದೇಶನ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
