ಬೆಂಗಳೂರು:ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಮಾರ್ಗಸೂಚಿಗಳಲ್ಲಿ ಮಾರ್ಪಾಡು ಮಾಡುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲನೆಗೆ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಪ್ರೊ.ಕೃಷ್ಣಯ್ಯ ಪಿ. ಶ್ರೀನಾಥ್ ಎಂಬುವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿತು.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯ ಪ್ರಕ್ರಿಯೆಯನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿ 2023 ನ. 29ರಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಮಹತ್ವದ ತೀರ್ಪು ನೀಡಿತ್ತು. ಅದರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಾಂತ್ ವಿ. ತಿಮ್ಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸರ್ಕಾರದ ಕ್ರಮವನ್ನು ಎತ್ತಿಹಿಡಿಯಲಾಗಿತ್ತು.
ಆದರೆ, ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವ ಸಂಬಂಧ ಸರ್ಕಾರ ರೂಪಿಸಿದ್ದ ಮಾರ್ಗಸೂಚಿಗಳ ವಿಭಾಗ 7, 10 ಮತ್ತು 11ರಲ್ಲಿ ಮಾರ್ಪಾಡುಗಳನ್ನು ಮೂರು ತಿಂಗಳಲ್ಲಿ ತರುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿತ್ತು. ಮೂರು ತಿಂಗಳು ಕಳೆದರೂ ಸರ್ಕಾರ ಇಲ್ಲಿತನಕ ಕ್ರಮ ಕೈಗೊಂಡಿಲ್ಲ. ಈ ಮೂಲಕ ಹೈಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
