ಬೆಂಗಳೂರು:ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಗಳ ನಕಲಿ ಜಾತಿ (ಬೇಡ ಜಂಗಮ) ಪ್ರಮಾಣ ಪತ್ರದ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ-ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಹಾಗೂ ಈ ಬಗ್ಗೆ ಚರ್ಚೆಗೆ ಅವಕಾಶಕ್ಕೆ ಆಗ್ರಹಿಸಿ ಪಿ.ಟಿ.ಪರಮೇಶ್ವರ ನಾಯ್್ಕ ಸೇರಿ ಕೆಲ ಕಾಂಗ್ರೆಸ್ ಸದಸ್ಯರು ಸಭಾಧ್ಯಕ್ಷ ಪೀಠದ ಎದುರು ಧಾವಿಸಿ ಧರಣಿ ನಡೆಸಿದ ಪ್ರಸಂಗ ಬುಧವಾರ ನಡೆಯಿತು.
ಶೂನ್ಯವೇಳೆಯಲ್ಲಿ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ರೇಣುಕಾಚಾರ್ಯ ಬಗ್ಗೆ ಬಳಸಿದ ಶಬ್ದದ ಬಗ್ಗೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಅವರು ಈ ಸದನದ ಗೌರವಾನ್ವಿತ ಸದಸ್ಯರು. ಅವರ ಬಗ್ಗೆ ಬಳಸಿರುವ ಈ ಪದವನ್ನು ಕಡತದಿಂದ ತೆಗೆದು ಹಾಕುವಂತೆ ಮನವಿ ಮಾಡಿದರು. ಸಭಾಧ್ಯಕ್ಷರು ಆ ಪದವನ್ನು ಕಡತದಿಂದ ತೆಗೆದು ಹಾಕಿರುವುವಾಗಿ ಪ್ರಕಟಿಸಿದರು. ರೇಣುಕಾಚಾರ್ಯ ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವುದು ಅಕ್ಷಮ್ಯ. ಇದು ಅಪರಾಧ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.
ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದಿರುವುದನ್ನು ರೇಣುಕಾಚಾರ್ಯರೇ ಒಪ್ಪಿಕೊಂಡಿದ್ದು ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್​ನ ಪ್ರಿಯಾಂಕ್ ಖರ್ಗೆ, ಪರಮೇಶ್ವರ ನಾಯ್್ಕ ಭೀಮಾನಾಯ್್ಕ ಮತ್ತಿತರರು ಒತ್ತಾಯಿಸಿದರಲ್ಲದೆ, ಈ ಬಗ್ಗೆ ಎದ್ದುನಿಂತು ಮಾತನಾಡಲು ಮುಂದಾದರು. ಸ್ಪೀಕರ್ ಈ ವಿಷಯದ ಬಗ್ಗೆ ಮಂಗಳವಾರ ಚರ್ಚೆ ನಡೆದಿದ್ದು ಶೂನ್ಯವೇಳೆಯಲ್ಲಿ ಮತ್ತೆ ಅವಕಾಶಕೊಡಲು ಸಾಧ್ಯವಿಲ್ಲ ಎಂದು ನಿರಾಕರಿಸಿದರು. ಆಗ ಪ್ರತಿಪಕ್ಷ ಸದಸ್ಯರು ಧರಣಿ ನಡೆಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ, ಧರಣಿನಿರತ ಸದಸ್ಯರನ್ನು ಸಮಾಧಾನಪಡಿಸಿ ಸ್ವಸ್ಥಾನಗಳಿಗೆ ಮರಳುವಂತೆ ಸೂಚಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮಗಳಿಗೆ ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸಹೋದರರು ಕೊಡಿಸಿದ್ದಾರೆ ಎಂಬುದನ್ನು ರೇಣುಕಾಚಾರ್ಯರೇ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದು, ಈ ರೀತಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ತಪು್ಪ. ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಬಹುದು. ಬೇರೆ ರೂಪದಲ್ಲಿ ಶಾಸಕರು ಈ ಬಗ್ಗೆ ರ್ಚಚಿಸಲು ಅವಕಾಶವಿದೆ ಎಂದು ಸಮಾಧಾನಪಡಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಯಾರಿಗೆ ಅನ್ಯಾಯವಾಗಿದೆ ಅವರು ದೂರು ಕೊಡಲಿ. ಸತ್ಯಾಸತ್ಯತೆ ಹೊರಬರಲಿ. ದಾಖಲೆ ಪ್ರಕಾರ ಕಾನೂನು ವಿಚಾರಣೆಯಾಗಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಹೆಚ್ಚಿನ ವಿಚಾರಣೆ ಬೇಡ ಎಂದಾಗ ಗೊಂದಲಕ್ಕೆ ತೆರೆ ಬಿತ್ತು.
ಗಲ್ಲಿಗೇರಲು ಸಿದ್ಧ!:ಈ ಚರ್ಚೆಯಿಂದ ತೀವ್ರ ಮುಜುಗರಕ್ಕೊಳಗಾದ ಎಂ.ಪಿ.ರೇಣುಕಾಚಾರ್ಯ, ಸಂವಿಧಾನಬಾಹಿರವಾಗಿ ಜಾತಿ ಪ್ರಮಾಣ ಪತ್ರ ಪಡೆದಿಲ್ಲ. ನನ್ನ ಸಹೋದರ ನನ್ನ ಪುತ್ರಿಗೆ ಪ್ರಮಾಣ ಪತ್ರ ಕೊಡಿಸಿದ್ದರು. ಅದನ್ನು ವಾಪಸ್ ಮಾಡಲಾಗಿದೆ. ನಾನು ಜಾತ್ಯತೀತ ವ್ಯಕ್ತಿ. ಈ ಜಾತಿ ಪ್ರಮಾಣ ಪತ್ರ ಇಟ್ಟುಕೊಂಡು ಸರ್ಕಾರದ ಯಾವುದೇ ಸೌಲಭ್ಯ ಪಡೆದಿಲ್ಲ. ನಕಲಿ ಪ್ರಮಾಣಪತ್ರವಿದ್ದರೆ ದಾಖಲೆ ನೀಡಲಿ, ಸರ್ಕಾರಿ ಸವಲತ್ತು ಪಡೆದಿದ್ದರೆ ಗಲ್ಲಿಗೇರಲು ಸಿದ್ಧ ಎಂದು ಸದನದಲ್ಲಿ ಹೇಳಿದರು.
ತಂದೆ ಸ್ಫೋಟಕ್ಕೆ ಬಲಿ; ಅರ್ಧ ಸುಟ್ಟು ಸಾವಿನೊಂದಿಗೆ ಸೆಣಸಾಡುತ್ತಿರುವ ಪುತ್ರಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 8 =
Remember me
