ಬೆಂಗಳೂರು:ನಾನು ಚುನಾವಣಾ ಆಖಾಡದಿಂದ ಹಿಂದೆ ಸರಿಯುತ್ತಿದ್ದೇನೆ ಎಂಬ ಫೇಕ್ ವಿಡಿಯೋ ಬಿಡುಗಡೆ ಮಾಡಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಫೇಕ್ ವಿಡಿಯೋ ಮಾಡಿರುವ ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸಬೇಕೆಂದು ದೂರಿನಲ್ಲಿ ಆಗ್ರಹಿಸಿರುವುದಾಗಿ ತಿಳಿಸಿದರು.
ಚುನಾವಣೆಯ ಹಿಂದಿನ ದಿನ ಫೇಕ್ ವಿಡಿಯೋವನ್ನು ರಾಘವೇಂದ್ರ ಬಿಡುಗಡೆ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಾನು ಮಾಡಿದ ಪ್ರಚಾರವನ್ನೇ ಈಗ ಮಾಡಿರುವಂತೆ ಬಿಂಬಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೆವೆ ಎಂಬ ಭಯದಿಂದ ಬಿ.ವೈ.ರಾಘವೇಂದ್ರ ಅವರು ನನ್ನದು ಮತ್ತು ನರೇಂದ್ರಮೋದಿ ಅವರ ಭಾವಚಿತ್ರವಿರುವ ಫೇಕ್ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ದ್ರೊಹ ಎಂದು ದೂರಿದರು.
ಈಶ್ವರಪ್ಪ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ನನಗೆ ಬೆಂಬಲಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದಾರೆ. ಇದು ಷಡ್ಯಂತ್ರ ಎಂದು ಆಕ್ರೊಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಉರುಳಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಇದಕ್ಕೆ ಉತ್ತರ ಕೊಡಬೇಕು. ಅವರು ಟೊಳ್ಳು ಇದ್ದಾರೋ, ಗಟ್ಟಿ ಇದ್ದಾರೋ ಅವರೇ ಉತ್ತರ ಕೊಡಬೇಕು. ನಾಳೆ ಸರ್ಕಾರ ಏನಾಗುತ್ತೆ ಗೊತ್ತಿಲ್ಲ. ನಾನು ಭವಿಷ್ಯಕಾರ ಅಲ್ಲ. ಪ್ರತಿಪಕ್ಷ ನಾಯಕ ಅಶೋಕ್, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ಹಾಸನ ಪೆನ್‌ಡ್ರೈವ್ ಪ್ರಕರಣ ಸಂಬಂಧ ಮಾತನಾಡಿದ ಅವರು, ಸಿದ್ಧರಾಮಯ್ಯ, ಡಿಕೆಶಿ, ಕುಮಾರಸ್ವಾಮಿ, ರೇವಣ್ಣ ಅವರು ಹೆಣ್ಣನ್ನು ತಾಯಿ ಅಂತಾರೆ. ಹೆಣ್ಣನ್ನು ಮುಂದೆ ಇಟ್ಟುಕೊಂಡು ರಾಜಕೀಯ ಮಾಡಿರುವುದು ಅಸಹ್ಯ. ಈ ಪ್ರಕರಣ ಸಿಬಿಐಗೆ ಕೊಡಬೇಕು ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಅವರನ್ನು 6 ವರ್ಷ ಉಚ್ಚಾಟನೆ ಮಾಡಿದ್ದಾಗಿ ಹೇಳಿ ಬಳಿಕ ಯಡಿಯೂರಪ್ಪ ಅವರೇ ಮನೆಗೆ ಹೋಗಿ ಶೆಟ್ಟರ್ ಅವರನ್ನು ಕರೆದುಕೊಂಡು ಬಂದು ಸೀಟು ಕೊಟ್ಟರು. ಈ ಉಚ್ಛಾಟನೆಯನ್ನು ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನಾನು ಮೋದಿ ಪರ ಕೈ ಎತ್ತುತ್ತೇನೆ ಎಂದು ತಿಳಿಸಿದರು.ರಾಘವೇಂದ್ರ ಲಿಂಗಾಯತರ ಹೆಸರಲ್ಲಿ, ಮಧು ಬಂಗಾರಪ್ಪ ಈಡಿಗರ ಹೆಸರಲ್ಲಿ ಓಟು ಕೇಳಿದರು. ಜಾತಿ ಹೆಸರಿನಲ್ಲಿ ಮತ ಕೇಳಲು ಇವರಿಗೆ ನಾಚಿಕೆ ಆಗಬೇಕು ಎಂದು ಈಶ್ವರಪ್ಪ ಕಿಡಿಕಾರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 14 =
Remember me
