ಬೆಂಗಳೂರು:ಸುಳ್ಳು ಬಿಜೆಪಿಯ ಮನೆ ದೇವರು. ಸುಳ್ಳುಗಳ ಮೂಲಕ ಜನರನ್ನು ಯಾಮಾರಿಸಿ, ದಿಕ್ಕು ತಪ್ಪಿಸಿ, ಹಾದಿ ತಪ್ಪಿಸಿ ಕೆಟ್ಟ ರಾಜಕಾರಣ ಮಾಡುತ್ತದೆ. ಅಧಿಕಾರಿ ಇದ್ದಾಗಲೂ ಸುಳ್ಳು, ಅಧಿಕಾರ ಇಲ್ಲದಿದ್ದಾಗಲೂ ಸುಳ್ಳುಗಳ ಮೇಲೆ ಅವಲಂಬನೆಯಾಗಿರುತ್ತದೆ. ನಿಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮನ್ನೇ ಯಾಮಾರಿಸುವವರನ್ನು ಈ ಕ್ಷಣದಿಂದಲೇ ತಿರಸ್ಕರಿಸಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್‌ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದರು.ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ. ಅದಕ್ಕೇ ಇಷ್ಟೊಂದು ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 10 =
Remember me
