ಬೆಂಗಳೂರು:ನಡು ರಸ್ತೆಯಲ್ಲೆ ಪತ್ನಿಯನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಬಳಿಕ ವ್ಯಕ್ತಿಯೊಬ್ಬ ಠಾಣೆಗೆ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಲವಕುಶ ನಗರ ನಿವಾಸಿ ಹೇಮಾ (೩೨) ಕೊಲೆಯಾದ ಮಹಿಳೆ.
ಕೃತ್ಯ ಎಸಗಿದ ಬಳಿಕ ಆರೋಪಿ ಪತಿ ಮಂಜುನಾಥ್ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿಯನ್ನು ರಾಜಗೋಪಾಲನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ಉತ್ತರ ವಿಭಾಗದ ಡಿಸಿಪಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಡೇಟಿಂಗ್​ಗೆ ಯುವತಿ ಜತೆಗೆ ರೂಂ ಬುಕ್ ಮಾಡಿಕೊಳ್ಳುವ ಆಸೆಗೆ ಬಿದ್ದ ಯುವಕನ ವ್ಯಥೆ ಹೇಳತೀರದು
ಮಂಜುನಾಥ್ ಟೆಂಪೋ ಚಾಲಕನಾಗಿದ್ದು, ಹೇಮಾ ಗಾರ್ಮೆಂಟ್ಸ್ ನಲ್ಲಿ‌ಕೆಲಸ ಮಾಡಿಕೊಂಡಿದ್ದರು. ಆರೋಪಿ ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನವಾಗಿದ್ದು, ಪತ್ನಿ ತುಮಕೂರಿಮ ಕುಣಿಗಲ್‌ನವರಾಗಿದ್ದಾರೆ. ದಂಪತಿ 12 ವರ್ಷದ ಹಿಂದೆ ವಿವಾಹವಾಗಿದ್ದು, ಒಂದು ಗಂಡು ಹಾಗೂ ಹೆಣ್ಣು ಮಗುವಿದೆ. ದಂಪತಿ ನಡುವೆ ಕೌಟುಂಬಿಕ ಕಲಹ ಇತ್ತು. ಆರೋಪಿ ಪತಿ ವಿರುದ್ಧ ಪತ್ನಿ ಹೇಮಾ ಈ ಹಿಂದೆ ಕೂಡ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಿರಿಯರ ರಾಜೀ ಸಂಧಾನದ ಬಳಿಕ ದಂಪತಿ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಆಗಿದ್ದು, ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
ಮಂಗಳವಾರ ಸಂಜೆ ದಂಪತಿ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ಹೋಗಿದೆ. ಮನೆಯಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಮಂಜುನಾಥ್ ಮನೆಯಲ್ಲಿದ್ದ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಹೇಮಾ ಕೂಗಿಕೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದು, ಆರೋಪಿ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದ. ತೀವ್ರ ರಕ್ತಸ್ರಾವವಾಗಿ ಬಿದ್ದಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಕರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಹೇಗಿರಬೇಕು?
ಘಟನೆ ಬಳಿಕ ಆರೋಪಿ ತಾನೇ ಠಾಣೆಗೆ ಬಂದು ಶರಣಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಚಾರಣೆ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಸ್ಕಾರಹೀನರಿಂದ ಅಂತ್ಯಸಂಸ್ಕಾರ ಮೃತರಿಗೆ ಅಪಚಾರ: ಒಂಬತ್ತು ಶವಗಳನ್ನು ಒಂದೇ ಗುಂಡಿಗೆ ಎಸೆದ ಸಿಬ್ಬಂದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
