ಬಂಟ್ವಾಳ:ಕಾಂತಾರ ಚಲನಚಿತ್ರದ ಮೂಲಕ ತುಳುನಾಡಿನ ದೈವಾರಾಧನೆ ಜಗತ್ತಿನೆಲ್ಲೆಡೆ ಮಹತ್ವ ಪಡೆಯುತ್ತಿರುವ ನಡುವೆಯೇ ಕಾರಣಿಕ ದೈವ ಕೊರಗಜ್ಜನಿಗೆ ಯೂಕ್ರೇನ್‌ನ ಕುಟುಂಬವೊಂದು ಮಗುವಿನ ಆರೋಗ್ಯಕ್ಕಾಗಿ ಅಗೇಲು ಸೇವೆ ಸಮರ್ಪಿಸಿರುವುದು ಗಮನ ಸೆಳೆದಿದೆ.
ಕೆಲ ತಿಂಗಳ ಹಿಂದೆ ಯೂಕ್ರೇನ್‌ನಿಂದ ಭಾರತಕ್ಕೆ ಪ್ರವಾಸ ಬಂದಿದ್ದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದ ಕುಟುಂಬ, ನಾಡಿ ನೋಡಿ ಔಷಧಿ ಕೊಡುವ ಭಕ್ತಿಭೂಷಣ್ ಪ್ರಭೂಜಿ ಅವರನ್ನು ಭೇಟಿ ಮಾಡಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಯೂಕ್ರೇನ್ ದಂಪತಿ ಗುರೂಜಿಯವರಲ್ಲಿ ತಿಳಿಸಿದ್ದು, ಅದರಂತೆ ದೇಸಿ ದನದ ಜತೆಗೆ ವಿಹಾರ ಸಹಿತ ನಾಟಿ ಚಿಕಿತ್ಸೆ ಆರಂಭಿಸಲಾಗಿತ್ತು.
ಕಳೆದ ಮೂರು ತಿಂಗಳಿನಿಂದ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಗೋವಿನತೋಟ ಶ್ರೀ ರಾಧಾ ಸುರಭೀ ಗೋಮಂದಿರದಲ್ಲಿ ಈ ಕುಟುಂಬ ವಾಸ್ತವ್ಯವಿತ್ತು. ಇಲ್ಲೇ ಸ್ವಾಮಿ ಕೊರಗಜ್ಜನ ಕಟ್ಟೆಯಿದ್ದು, ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭ ನಡೆದಿದ್ದ ಕೊರಗಜ್ಜನ ಕೋಲದಲ್ಲಿ ಮಗನ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಯೂಕ್ರೇನ್ ದಂಪತಿ ಕೋರಿಕೊಂಡಿದ್ದರು. ಅಲ್ಲದೆ, ಮಗನಿಗೆ ಆರೋಗ್ಯ ಕರುಣಿಸಿದರೆ ಅಗೇಲು ಸೇವೆ ನೀಡುವುದಾಗಿ ಹರಕೆ ಹೇಳಿದ್ದರು.
ಪ್ರಸಕ್ತ ಮಗ ಮ್ಯಾಕ್ಸಿಂ ಗುಣಮುಖನಾಗಿದ್ದಾನೆ. ಅದರಂತೆ ಯೂಕ್ರೇನ್ ಕುಟುಂಬ ಶುಕ್ರವಾರ ರಾತ್ರಿ ಕೊರಗಜ್ಜನಿಗೆ ಅಗೇಲು ಸೇವೆ ಸಮರ್ಪಿಸಿದೆ. ಭಕ್ತಿಭೂಷಣ್ ದಾಸ್ ಪ್ರಭೂಜಿ, ಪದ್ಮನಾಭ ಗೋವಿನ ತೋಟ, ರಾಮಚಂದ್ರ ಮಾರಿಪಳ್ಳ, ಯಾದವ ಕೊಡಂಗೆ, ನವೀನ್ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು. ಮಗು ಈಗಾಗಲೇ ಗುಣಮುಖವಾಗಿದೆ, ಇನ್ನಷ್ಟು ಆರೋಗ್ಯದಲ್ಲಿ ಸುಧಾರಣೆಯಾಗಲಿ. ಇಲ್ಲಿಗೆ ಬಂದವರಿಗೆ ಕೊರಗಜ್ಜ ಅನುಗ್ರಹಿಸಲಿ ಎಂದು ಪ್ರಾರ್ಥಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 8 =
Remember me
