ಬೆಂಗಳೂರು:ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ(74) ಅವರು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ  ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ.
ಜಾನಪದ ಸಂಗೀತದ ಮೇಲಿದ್ದ ಪ್ರೀತಿ ಎಂತಹದ್ದು ಎಂದರೆ ಇವರು ಹೆಡ್‌ ಕಾನ್‌ಸ್ಟೇಬಲ್‌ ಹುದ್ದೆಗೆ ರಿಸೈನ್‌ ಮಾಡಿ ತಮ್ಮ ಆಸಕ್ತಿಗೆ ಒತ್ತು ನೀಡಿದ್ದರು. ಆಲೂರು ನಾಗಪ್ಪ, ಗಾಯಕರಾಗಿ ಮಾತ್ರವಲ್ಲ, ಕನ್ನಡಪರ ಹೋರಾಟಗಾರರಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಇನ್ನು ಇವರ ಮಗಳು ದಿವ್ಯ ಅಲೂಕು ಕೂಡ ನಿರೂಪಕಿ, ಗಾಯಕಿಯಾಗಿದ್ದಾರೆ.
ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ, ತತ್ವಪದಗಳ ಹರಿಕಾರಕ.  ಆಲೂರು ನಾಗಪ್ಪ ಅವರು ಯುವಜನತೆ, ಮಹಿಳೆಯರು, ನಾಡುನುಡಿಗೆ ಸಂಬಂಧಿಸಿದ ಎಲ್ಲಾ ರೀತಿಯ ಹಾಡುಗಳನ್ನೂ ಬರೆದಿದ್ದಾರೆ. ಭಕ್ತಿ ಗೀತೆಗಳನ್ನೂ ರಚಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + eighteen =
Remember me
