ಬೆಂಗಳೂರು:ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ, ನಿರರ್ಗಳ ಅರ್ಥಗಾರಿಕೆಯಿಂದ ಮನೆ ಮಾತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.
ಯಕ್ಷಗಾನ, ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷರು, ಮಾಜಿ ಶಾಸಕರು ಹಾಗೂ ಯಕ್ಷಗಾನ ಮತ್ತು ತಾಳಮದ್ದಳೆಯ ಜನಪ್ರಿಯ ಕಲಾವಿದ ಶ್ರೀ ಕುಂಬಳೆ ಸುಂದರರಾವ್ ರವರು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಸಿಗಲಿ, ದೇವರು ಅವರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಓಂ ಶಾಂತಿಃpic.twitter.com/pDDfzug1L2
— Basavaraj S Bommai (@BSBommai)November 30, 2022

ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರಾಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿ 1994ರಿಂದ 1999ರವರೆಗೆ ಕಾರ್ಯ ನಿರ್ವಯಿಸಿದ್ದರು. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆ ಅರವದ್ದು.
ಕುಂಬ್ಳೆ ಸುಂದರ್ ರಾವ್​ರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಗಳೂರು ಪಂಪ್ವೆಲ್​ ಬಳಿ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ

ಮಕ್ಕಳ ಸ್ಕೂಲ್ ಬ್ಯಾಗ್‌ಗಳಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ, ಸಿಗರೇಟ್‌, ವೈಟ್‌ನರ್‌ ಪತ್ತೆ! ಬೆಂಗಳೂರಲ್ಲಿ ಆಘಾತಕಾರಿ ಪ್ರಕರಣ ಬಯಲು



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
