ಹುಬ್ಬಳ್ಳಿ:ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಧಾರವಾಡ-ಹುಬ್ಬಳ್ಳಿ ಇಂದಿರಾ ಕ್ಯಾಂಟಿನ್​‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು.
ಡಾ. ಮಯೂರ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಧಾರವಾಡ ಮಿನಿವಿಧಾನಸೌಧ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್​ನಲ್ಲಿ ಊಟದ ಜೊತೆಗೆ ಹೋಳಿಗೆ ವಿತರಣೆ ಮಾಡಲಾಯಿತು.
ಧಾರವಾಡ-ಹುಬ್ಬಳ್ಳಿ ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿ ಮೂರು ಜಿಲ್ಲೆಗಳ 17 ಕ್ಯಾಂಟಿನ್​ಗಳಲ್ಲಿ ಒಟ್ಟು 9 ಸಾವಿರ ಹೊಳಿಗೆ ವಿತರಣೆ ಮಾಡಲಾಗಿದೆ.
ಇದನ್ನೂ ಓದಿ:ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೀದರ್​ನಿಂದ ಚಾಮರಾಜನಗರದವರೆಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನೋಡಲು ಬೃಹತ್ ಎಲ್.ಇ.ಡಿ ಪರದೆ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್​ ಗೆಹ್ಲೋಟ್​ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.
ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್​, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ನಟ ಕಮಲ್​ ಹಾಸನ್​, ನಟ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಜೇಂದ್ರ ಸಿಂಗ್​ ಬಾಬು, ದುನಿಯಾ ವಿಜಯ್​, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದರು.
ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಮೂರನೇ ಬಾರಿಗೆ ಎಂ.ಬಿ. ಪಾಟೀಲರಿಗೆ ಮಂತ್ರಿಗಿರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
