ಬೆಂಗಳೂರು:ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪುನೀತ್​​ ರಾಜ್​ಕುಮಾರ್​​ ಸಮಾಧಿಯ ಬಳಿ ಅಭಿಮಾನಿಗಳ ದಂಡು ಹರಿದು ಬರುತ್ತಿದ್ದು, ಹೆಚ್ಚಿನ ಜನಸಂಖ್ಯೆಯಿಂದಾಗಿ ಕಂಠೀರವ ಸ್ಟುಡಿಯೋದ ಗೇಟನ್ನು ಮುಚ್ಚಲಾಗಿದೆ.
ಮಂಗಳವಾರ (ನ.1) ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಅಪ್ಪು ಸಮಾಧಿಯ ಮುಂದೆ ಆಚರಿಸಿಸುವ ಸಲುವಾಗಿ ರಾಜ್ಯ ಮತ್ತು ಹೊರರಾಜ್ಯಗಳಿಂದ ಅಭಿಮಾನಿಗಳು ಬರುತ್ತಿದ್ದು, ಮಧ್ಯಾಹ್ನವಾದ್ರೂ‌ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಧ್ಯಾಹ್ನದ ಹೊತ್ತಿಗೆ ಸುಮಾರು 50 ಸಾವಿರಕ್ಕೂ ಅಧಿಕ ಅಭಿಮಾನಿಗಳ ಸಮಾಧಿಗೆ ಭೇಟಿ ನೀಡಿದ್ದಾರೆ. ಬಿಗಿ ಬಂದೋಬಸ್ತ್​​ನ ಕಾರಣದಿಂದ ಹಾಕಲಾದ ಬ್ಯಾರಿಕೇಡ್​ಗಳ ಒಳಗೆ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ತುಂಬಿಕೊಂಡಿದ್ದಾರೆ.
ಅಭಿಮಾನಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಪೊಲೀಸರು ಕಂಠೀರವ ಸ್ಟುಡಿಯೋ ಮುಂಭಾಗದ ಗೇಟನ್ನು ಕ್ಲೋಸ್ ಮಾಡಿದ್ದಾರೆ. ಅಭಿಮಾನಿಗಳನ್ನು ಹಂತ ಹಂತವಾಗಿ ಒಳಗೆ ಬಿಡಲು ವ್ಯವಸ್ಥೆ ಮಾಡಲಾಗಿದೆ. ಅಪ್ಪು ನಿಧನದ ದಿನದಿಂದ ಪ್ರತೀ ದಿನ ಸಮಾಧಿಯ ಬಳಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದು, ಒಂದು ರೀತಿಯಲ್ಲಿ ಅಪ್ಪು ಸಮಾಧಿ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 13 =
Remember me
