ಉತ್ತರಕನ್ನಡ:ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ. ಮತ್ತೊಮ್ಮೆ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಜೆಡಿಎಸ್ ನಾಯಕರು ಈಗಾಗಲೇ ಹೇಳಿಕೊಂಡಿದ್ದಾರೆ. ಅಲ್ಲದೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡ ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗಬೇಕೆಂದು ಬಯಸಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಬೂಸ್ಟರ್ ಡೋಸ್ ಕೊಟ್ಟ ಮೋದಿ ಮೆಗಾ ರೋಡ್ ಶೋ; ಫೋಟೋ ಝಲಕ್​ ಇಲ್ಲಿದೆ…
ಇದೀಗ ಅಭಿಮಾನಿಯೊಬ್ಬ ಸಮುದ್ರಳಾದಲ್ಲಿ ಫೋಟೋ ಪ್ರದರ್ಶಿಸಿ ಎಚ್.​ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಹೇಳಿದ್ದಾನೆ. ಸ್ಕೂಬಾ ಡೈವಿಂಗ್ ಮಾಡಿರುವ ಯುವಕ ಈ ವೇಳೆ ಎಚ್​ಡಿಕೆ ಫೋಟೋ ಪ್ರದರ್ಶಿಸಿ, ಗಮನ ಸೆಳೆದಿದ್ದಾನೆ.
ಇದನ್ನೂ ಓದಿ:ಯಾವ ಉದ್ದೇಶಕ್ಕೆ ಟ್ರೋಲ್ ಆಗಬೇಕು ಎನ್ನುತ್ತಲೇ ಪ್ರಶಾಂತ್ ಸಂಬರಗಿಗೆ ಟಾಂಗ್ ಕೊಟ್ಟ ಶಿವಣ್ಣ!
ಎಚ್​ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂಬ ಕನಸು ಹೊಂದಿರುವ ಯುವಕ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಸಮೀಪದ ನೇತ್ರಾಣಿ ನಡುಗಡ್ಡೆಯಲ್ಲಿ ಸ್ಕೂಬಾ ಡೈವಿಂಗ್ ಮಾಡಿ, ಫೋಟೋ ಪ್ರದರ್ಶಿಸಿದ್ದಾನೆ. ಸದ್ಯ ಯುವಕ ಸಮುದ್ರ ಆಳಕ್ಕೆ ತೆರಳಿ ಎಚ್​ಡಿಕೆ ಮತ್ತೆ ಸಿಎಂ ಆಗಲಿ ಎಂದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
