ಮಂಡ್ಯ:ಕೊಪ್ಪ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸೇರಿದಂತೆ ಹಲವರ ವಿರುದ್ಧ ಡೆತ್​ನೋಟ್​ ಬರೆದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದ್ದ ಪ್ರಹಸನ ಇಂದು ಬೆಳಗ್ಗೆ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಬಿದರಮೆಳೆ ಗ್ರಾಮದ ರೈತ ಮೋಹನ್ ಆತ್ಮಹತ್ಯೆಗೆ ಯತ್ನಿಸಿದವ. ‘ಬೆಕ್ಕಳಲೆ ಗ್ರಾಮದ ಪ್ರಾಥಮಿಕ ಸಹಕಾರ ಸಂಘದಲ್ಲಿ ತನ್ನನ್ನು ಸಾಲಮನ್ನಾ ಯೋಜನೆಯಿಂದ ಹೊರಗಿಟ್ಟಿದ್ದಾರೆ. ಸಾಲಮನ್ನಾ ಮಾಡದೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ ಮೋಹನ್, ಸಾಲಮನ್ನಾ ಮಾಡಿಸಿಕೊಡಿ, ಇಲ್ಲವಾದರೆ ಸಾಯುವೆ’ ಎಂದು ಟವರ್​ ಮೇಲೆ ಕುಳಿತಿದ್ದ.
ಇದನ್ನೂ ಓದಿರಿಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, ಚಿಕಿತ್ಸೆ ಸಿಗದೆ 7 ತಿಂಗಳ ಮಗು ಸಾವು
‘ಸಾಲಮನ್ನಾಕ್ಕಾಗಿ ಕಾನೂನು ಹೋರಾಟ ಮಾಡಿದರೂ ನನಗೆ ನ್ಯಾಯ ಸಿಕ್ಕಿಲ್ಲ. ನನ್ನ ಸಾವಿಗೆ ಬೆಕ್ಕಳಲೆ ಗ್ರಾಮದ ಪ್ರಾಥಮಿಕ ಸಹಕಾರ ಸಂಘದ ಇಒ, ಆಡಳಿತ ಮಂಡಳಿ, ಕೊಪ್ಪ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಹಾಗೂ ಡಿಆರ್ ಕಾರಣ’ ಎಂದು ಪತ್ರ ಬರೆದಿಟ್ಟ ಮೋಹನ್, ಟವರ್ ಮೇಲೇರಿ ಆತ್ಮಹತ್ಯೆ ಬೆದರಿಕೆ ಹಾಕುತ್ತಿದ್ದರು.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ರೈತನ ಮನವೊಲಿಕೆಗೆ ಯತ್ನಿಸಿದರೂ ಆರಂಭದಲ್ಲಿ ಫಲಿಸಲಿಲ್ಲ. ಕ್ಷಣಾರ್ಧದಲ್ಲೇ ಜನಜಂಗುಳಿ ಸೇರಿತು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೆಲ ಸಮಯದ ಬಳಿಕ ರೈತನ‌ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾದರು. ಸುರಕ್ಷಿತವಾಗಿ ರೈನನ್ನು ಕೆಳಗಿಳಿಸಲಾಯಿತು.
‘ಅಪ್ಪ.. ಯಾವ ಕಾಲೇಜಿಗೆ ಸೇರಿಸುತ್ತಿದ್ದೆ?’ ಎಂದ ಮಗ ಬಾರದ ಲೋಕಕ್ಕೆ ಸೇರಿಯೇಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + three =
Remember me
