ಮಂಡ್ಯ:ಬೆಳೆಗೆ ತಗುಲಿದ ಬೆಂಕಿಯನ್ನು ಆರಿಸುತ್ತಲೇ ರೈತನೊಬ್ಬ ಜೀವಂತ ಸುಟ್ಟುಹೋದ ದುರಂತ ಪ್ರಕರಣವೊಂದು ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ಎಕರೆಗಟ್ಟಲೆ ಪ್ರದೇಶದಲ್ಲಿದ್ದ ಬೆಳೆ ಭಸ್ಮವಾಗಿದೆ.
ಬೆಂಕಿ ನಂದಿಸುತ್ತಿದ್ದ ಮಹಾಲಿಂಗಯ್ಯ (60) ಸಾವಿಗೀಡಾದ ರೈತ. ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಬೆಂಕಿ ಆಕಸ್ಮಿಕ ಸಂಭವಿಸಿದೆ. ಇಲ್ಲಿನ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಬೆಂಕಿ, ಬಳಿಕ ಕೆಲವೇ ನಿಮಿಷಗಳಲ್ಲಿ ಅಕ್ಕಪಕ್ಕದ ಗದ್ದೆಗಳಿಗೂ ವ್ಯಾಪಿಸಿದೆ.
ದಟ್ಟ ಹೊಗೆ ನೋಡಿ ಗ್ರಾಮಸ್ಥರು ಜಮೀನು ಬಳಿಗೆ ದೌಡಾಯಿಸಿದ್ದರು. ತಕ್ಷಣ ಅಕ್ಕಪಕ್ಕದಲ್ಲಿ ಸಿಕ್ಕ ಮಣ್ಣು, ನೀರು ಹಾಕಿ ಬೆಂಕಿ ಆರಿಸಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಮಹಾಲಿಂಗಯ್ಯ ಸಜೀವ ದಹನಗೊಂಡು ಅಲ್ಲೇ ಸಾವಿಗೀಡಾಗಿದರು. ಹೊಲದಲ್ಲಿ ಅವರ ದೇಹ ಸುಟ್ಟು ಕರಕಲಾಗಿದೆ. ಹಲವರ ಎಕರೆಗಟ್ಟಲೆ ಬೆಳೆ ಹಾನಿಗೊಂಡಿದ್ದು, ಬೆಂಕಿ ಬೀಳಲು ಕಾರಣ ಏನು ಎಂಬುದು ಇನ್ನೂ ಖಚಿತಗೊಂಡಿಲ್ಲ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮದುವೆ ದಿನವೇ ಫಿಸಿಯೋಥೆರಪಿ ಎಕ್ಸಾಂ; ವಿವಾಹದ ದಿರಿಸಿನಲ್ಲೇ ಪರೀಕ್ಷೆಗೆ ಬಂದ ವಧು

40 ಸಾವಿರ ರೂ. ವಂಚಿಸಿ 15 ವರ್ಷ ತಲೆಮರೆಸಿಕೊಂಡಿದ್ದವ 2 ಚಿನ್ನದ ಹಲ್ಲುಗಳಿಂದಾಗಿ ಸಿಕ್ಕಿಬಿದ್ದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − nine =
Remember me
