ಬೆಂಗಳೂರು:ಬಿಗ್​ಬಾಸ್​​ ಅತ್ಯಂತ ಹೆಚ್ಚಿನ ಜನಮನ್ನಣೆ ಪಡೆದಿರುವ ಕಾರ್ಯಕ್ರಮವಾಗಿದೆ. ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಡಲು ಜನಸಾಮಾನ್ಯರು ಹಾಗೂ ಸೆಲಬ್ರೆಟಿಗಳು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಆದರೆ ಕೆಲವು ಜನಕ್ಕೆ ಮಾತ್ರ ಅವಕಾಶ ದೊರೆಯುತ್ತದೆ. ಹೀಗೆ ಬಿಗ್​ಬಾಸ್​ ಮನೆ ಪ್ರವೇಶ ಮಾಡಲು ನನಗೆ ಒಂದು ಅವಕಾಶ ಕೊಡಿ ಎಂದು ರೈತನೊಬ್ಬ ಕಿಚ್ಚಾ ಸುದೀಪ್​​ ಅವರ ಬಳಿ ವಿಶೇಷವಾಗಿ ಮನವಿ ಮಾಡಿದ್ದಾನೆ. ಈ ಕುರಿತಾದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.
ವ್ಯಕ್ತಿಯೊಬ್ಬ ಎತ್ತಿನ ಗಾಡಿನಲ್ಲಿ ಬೆಂಗಳೂರಿಗೆ ಬಂದು ಕಿಚ್ಚ ಸುದೀಪ್​ ಅವರ ಮನೆಯ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ‘ನಮ್ಮ ನಡಿಗೆ ಬಿಗ್​ ಬಾಸ್​ ಕಡೆಗೆ. ಅವಿದ್ಯಾವಂತ ರೈತರಿಗೆ ಒಂದು ಅವಕಾಶ ಕೊಡಿ’ ಎಂಬ ಬ್ಯಾನರ್​ ಅನ್ನು ಎತ್ತಿನ ಗಾಡಿಗೆ ಕಟ್ಟಿಕೊಂಡು ಅವರು ಬಂದಿದ್ದಾರೆ.
ರೈತ ತಾನೂ ಟಿ. ನರಸೀಪುರದಿಂದ ಬಂದಿರುವುದಾಗಿ ಈ ವ್ಯಕ್ತಿ ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಸುದೀಪ್​ ಮನೆಯ ಭದ್ರತಾ ಸಿಬ್ಬಂದಿ ಈ ರೈತನಿಗೆ ಬುದ್ಧಿ ಹೇಳಿ ವಾಪಸ್​ ಕಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಾದ ವಿಡಿಯೋ ವೈರಲ್​ ಆಗುತ್ತಿದೆ.
ಬಿಗ್​ ಬಾಸ್​ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಆದರೆ ಎಲ್ಲರಿಗೂ ಚಾನ್ಸ್​ ಸಿಗುವುದಿಲ್ಲ. ಅವಕಾಶಕ್ಕಾಗಿ ಕೆಲವರು ಹಲವಾರು ಬಗೆಯ ಸರ್ಕಸ್​ ಮಾಡುತ್ತಾರೆ. ವಿವಿಧ ರೀತಿಯಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − six =
Remember me
