ಹಾಸನ:ವಿದ್ಯುತ್​ ಶಾಕ್​ಗೆ ಒಳಗಾದ ಕೃಷಿಕರೊಬ್ಬರು ಸ್ಥಳದಲ್ಲೇ ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ಹಾಸನ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಹಾಸನದ ಮಾರೇನಹಳ್ಳಿ ಗ್ರಾಮದ ಶಶಿಕುಮಾರ್ (32) ಸಾವಿಗೀಡಾದವರು.
ಶಶಿಕುಮಾರ್ ಅವರು ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್​ ತಂತಿ ತುಂಡಾಗಿ ಅವರ ಮೇಲೆ ಬಿದ್ದಿದ್ದು, ಅವರು ತೀವ್ರ ಶಾಕ್​​ಗೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಶಿಕುಮಾರ್​ ವರ್ಷದ ಹಿಂದಷ್ಟೇ ವಿವಾಹವಾಗಿದ್ದರು.
ಚೆಸ್ಕಾಂ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳದಿಂದ ಮೃತದೇಹ ಮೇಲೆತ್ತಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿದರು. ಅಲ್ಲದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ನಾಲಿಗೆ ಚಪಲದಿಂದಾಗಿ ಜೈಲು ಸೇರಿದ ಭೂಪರು; ಬಂಧಿತರಿಂದ ಬಂದೂಕು-ಬೈಕ್ ವಶ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
