ಹುಬ್ಬಳ್ಳಿ: ಸಹಕಾರ ಬ್ಯಾಂಕುಗಳಲ್ಲಿನ ರೈತರ ಸಾಲದ ಮೇಲಿನ ಬಡ್ಡಿ ಮತ್ತು ಸುಸ್ತಿ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದಿಂದಾಗಿ ರಾಜ್ಯದ ಬೊಕ್ಕಸಕ್ಕೆ 400 ಕೋಟಿ ರೂಪಾಯಿಗೂ ಅಧಿಕ ಹೊರೆಯಾಗಲಿದೆ ಎಂದರು.ಸಚಿವ ಸಂಪುಟದ ವಿಸ್ತರಣೆ ಆಗಿದ್ದು, ಖಾತೆ ಹಂಚಿಕೆ ವಿಚಾರ ತೀರ್ಮಾನವಾಗಬೇಕಷ್ಟೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ನೂತನ ಸಚಿವರ ಖಾತೆ ಹಂಚಿಕೆ ಸೋಮವಾರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.ಮಹದಾಯಿ ಜಲ ವಿವಾದದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದ್ದು, ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದ ಅವರು, ಪ್ರತ್ಯೇಕ ವಿಜಯ ನಗರ ಜಿಲ್ಲೆಯ ಬೇಡಿಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರದ ಮುಂದೆ ವಿಜಯನಗರ ಪ್ರತ್ಯೇಕ ಜಿಲ್ಲೆ ರಚಿಸುವ ಕುರಿತ ಯಾವುದೇ ವಿಚಾರ, ಪ್ರಸ್ತಾವನೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
