ಚಿಕ್ಕಬಳ್ಳಾಪುರ:ನಿನ್ನೆಯಷ್ಟೇ ಮಹಿಳೆಯೊಬ್ಬರು ರೋಟರ್ ಟ್ರ್ಯಾಕ್ಟರ್​ಗೆ ಬಲಿಯಾದ ಘಟನೆ ಬೆನ್ನಿಗೇ ಇಂದು ಮತ್ತೊಂದು ಅಂಥದ್ದೇ ದುರಂತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಅವಘಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕಾಮಗಾನಹಳ್ಳಿ ನಿವಾಸಿ ಟ್ರ್ಯಾಕ್ಟರ್ ಚಾಲಕ ದೊಡ್ಡನರಸಿಂಹಯ್ಯ (45) ಸಾವಿಗೀಡಾಗಿದ್ದಾರೆ. ಈ ಅವಘಡ ನಿನ್ನೆ ತಡರಾತ್ರಿ ಸಂಭವಿಸಿದ್ದು, ಈ ಪ್ರಕರಣ ಇಂದು ಬೆಳಕಿಗೆ ಬಂದಿದೆ.
ಇವರು ನಿನ್ನೆ ರಾತ್ರಿ ಉಳುಮೆಗೆಂದು ರೋಟರ್ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದರು. ಈ ವೇಳೆ ಅವರು ಟ್ರ್ಯಾಕ್ಟರ್​ನಿಂದ ಜಾರಿ ಬಿದ್ದಿದ್ದು, ಅದರ ಬ್ಲೇಡ್​ಗಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಂಚೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ರ್ಯಾಕ್ಟರ್​ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಪತಿ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್​ಗೆ ಸಿಲುಕಿ ಪತ್ನಿ ಸಾವು; ಛಿದ್ರಗೊಂಡ ದೇಹ, ತುಂಡಾಗಿ ಬಿದ್ದ ಕೈ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − three =
Remember me
