ಬೆಂಗಳೂರು:ಕೃಷಿಕರೊಬ್ಬರು ಅಡಕೆ ಮಾರಾಟ ಮಾಡಿದ್ದ 26.5 ಲಕ್ಷ ರೂ.ಗಳನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​.ಜೆ ಪಾರ್ಕ್ ಇನ್ಸ್​ಪೆಕ್ಟರ್​ ಯೊಗೇಶ್​ ಕುಮಾರ್​ರನ್ನು​ ಅಮಾನತು ಮಾಡಿ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.
ಸದ್ಯ ಇನ್ಸ್​ಪೆಕ್ಟರ್​ ಯೊಗೇಶ್ ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ದರೋಡೆ ಮಾಡಿದ ಹಣದಲ್ಲಿ ಸಬ್​ ಇನ್ಸ್​ಪೆಕ್ಟರ್​ ಜೀವನ್ ಕುಮಾರ್, ಯೋಗೇಶ್​ ಅವರಿಗೆ 6 ಲಕ್ಷ ರೂ. ನೀಡಿದ್ದರು. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಣ ನೀಡಿರುವುದು ಬಯಲಿಗೆ ಬಂದಿತ್ತು.
ಸಿಟಿ ಮಾರುಕಟ್ಟೆ ಇನ್ಸ್​ಪೆಕ್ಟರ್​ ಕುಮಾರಸ್ವಾಮಿ ನೇತೃತ್ವದಲ್ಲಿ ಸಬ್ ಇನ್ಸ್​ಪೆಕ್ಟರ್​ ಜೀವನ್ ಕುಮಾರ್ ವಿಚಾರಣೆ ನಡೆದಿತ್ತು. ಈ ವೇಳೆ ಹಣ ನೀಡಿರುವುದಾಗಿ ಜೀವನ್​ ಬಾಯ್ಬಿಟ್ಟಿದ್ದರು. ಹೀಗಾಗಿ ದರೋಡೆಗೆ ಸಹಕರಿಸಿದ ಆರೋಪದ ಮೇಲೆ ಯೋಗೇಶ್​ ಅವರನ್ನು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಅಮಾನತು ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
26 ಲಕ್ಷ ದರೋಡೆ ಮಾಡಿದ್ದ ಪ್ರಕರಣ: ಎಸ್​ಐ ಗ್ಯಾಂಗ್​ನಲ್ಲಿ ಪೇದೆ, ಮತ್ತೆ ನಾಲ್ವರ ಸೆರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
