ದಾವಣಗೆರೆ:ಸಾಲಬಾಧೆ ತಾಳಲಾರದೆ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಡ್ಡೇಹಳ್ಳಿ ಗ್ರಾಮದ ಇಂದೂಧರ್​​ ಅಲಿಯಾಸ್​ ಇಂದಪ್ಪ(62) ಮೃತ ದುರ್ದೈವಿ. ಹೊಸಕೊಪ್ಪ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಮುಂದಿನ ಒಂದು ವಾರ ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ
ಇಂದೂಧರ್​ ಕೃಷಿ ಚಟುವಟಿಕೆಗಳಿಗಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಮಳೆ ಇಲ್ಲದೆ ಬೆಳೆ ಕೈಕೊಟ್ಟ ಪರಿಣಾಮ ಸಾಲಬಾಧೆ ತಾಳಲಾರದೆ ರೈತ ಇಂದೂಧರ್​ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
