ಬೆಳಗಾವಿ:ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಡಿಲು ಅಬ್ಬರಿಸುತ್ತಿದ್ದು, ಈಗಾಗಲೇ ಹಲವರು ಸಾವಿಗೀಡಾಗಿದ್ದಾರೆ. ಅದರಲ್ಲೂ ವಿಜಯಪುರದಲ್ಲಿ ವ್ಯಕ್ತಿಯೊಬ್ಬರು ಸಿಡಿಲಿಗೆ ಬಲಿಯಾದ ಬೆನ್ನಿಗೇ ಮತ್ತೊಬ್ಬರು ಸಿಡಿಲಿನಿಂದ ಸಾವಿಗೀಡಾಗಿದ್ದಾರೆ.
ಇಂದು ಮಧ್ಯಾಹ್ನ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್ ಹಣಮಂತ ಸತ್ತಿಗೇರಿ (40) ಸಿಡಿಲಪ್ಪಳಿಸಿದ ಪರಿಣಾಮವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಇದರ ಬೆನ್ನಿಗೆ ಬೆಳಗಾವಿಯಲ್ಲೂ ಅಂಥದ್ದೇ ಒಂದು ಪ್ರಕರಣ ನಡೆದಿದೆ.
ಬೆಳಗಾವಿ ಜಿಲ್ಲೆಯ ಕೆಲವೆಡೆ ಇಂದು ಗುಡುಗು-ಸಿಡಿಲು ಸಮೇತ ಭಾರಿ ಮಳೆಯಾಗಿದ್ದು, ಭಾರಿ ಸಿಡಿಲೊಂದು ರೈತ ಮಹಿಳೆಯನ್ನು ಬಲಿ ಪಡೆದಿದೆ. ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದ ಮಲ್ಲಮ್ಮ ಕಲ್ಮೇಶ ವಟವಟಿ (38) ಎಂಬಾಕೆ ಸಾವಿಗೀಡಾದವರು.
ಇವರು ಗ್ರಾಮದ ಹೊರವಲಯದ ತಮ್ಮ ಹೊಲದಲ್ಲಿ ಜಾನುವಾರುಗಳಿಗಾಗಿ ಮೇವು ತೆಗೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಸಿಡಿಲಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಈಕೆಯ ಹೊಟ್ಟೆ ಛಿದ್ರಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಫ್​ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು

‘ನಾನು ನಿಮ್ಮ ಓಲ್ಡ್ ಸ್ಟುಡೆಂಟ್..’ ಎಂದು ಹೇಳಿ ಶಿಕ್ಷಕಿಗೇ ಮೋಸ ಮಾಡಿದ ವಂಚಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 4 =
Remember me
