ಬೆಂಗಳೂರು:ಕಾವೇರಿ ಜಲಸಂಕಷ್ಟ, ಜನರ ಆತಂಕ ನಿವಾರಿಸಲು ಕೂಡಲೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ಸರ್ಕಾರಕ್ಕೆ ಸೂಚಿಸಲು ರಾಜ್ಯಪಾಲರಿಗೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ನಿಯೋಗ ಮನವಿ ಮಾಡಿದೆ.
ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ಕುರಬೂರು ಶಾಂತಕುಮಾರ್ ನೇತೃತ್ವದ ನಿಯೋಗ ಶನಿವಾರ ಭೇಟಿ ಮಾಡಿ, ಸಮಸ್ಯೆ ಹಾಗೂ ಹೋರಾಟದ ಬಗ್ಗೆ ವಿವರಿಸಿ ಮನವಿಯನ್ನು ಸಲ್ಲಿಸಿದೆ.
ತಮಿಳುನಾಡು ಸರ್ಕಾರ ವಿಶೇಷ ಅಧಿವೇಶನ ನಡೆಸಿ ನಿರ್ಣಯ ಅಂಗೀಕರಿಸಿದೆ. ಕರ್ನಾಟಕದವರು ನೀರು ಬಿಡದೆ ತೊಂದರೆ ಕೊಡುತ್ತಿದ್ದಾರೆ ಎಂದು ವರದಿ ಸಲ್ಲಿಸಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಇಂತಹ ಕಠಿಣ ನಿರ್ಧಾರಗಳು ಜಾರಿಗೆ ಬಂದಿಲ್ಲ.
ಮೂರು ದಿನಗಳಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಆತಂಕವಿರುವ ಕಾರಣ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸಲಾಗುತ್ತದೆ ಎಂಬ ನಿರ್ಣಯ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ಗೆಹಲೋತ್ ಅವರಿಗೆ ನಿಯೋಗ ಮೊರೆಯಿಟ್ಟಿದೆ.
ಬಂದ್ ಯಶಸ್ವಿಯಾದ ಬಳಿಕ ರೈತರ ನಿಯೋಗವನ್ನು ಕರೆಯಿಸಿಕೊಂಡು ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದರು. ವಿಧಾನ ಮಂಡಲ ವಿಶೇಷ ಅಧಿವೇಶನ ಕರೆಯಬೇಕೆಂದು ಪ್ರಸ್ತಾಪಿಸಿದಾಗ ನಿವೃತ್ತ ನ್ಯಾಯಾಧೀಶರು, ನೀರಾವರಿ ತಜ್ಞರ ಜತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಸಮಿತಿ ಸಲ್ಲಿಸಿದ ಮನವಿಯಲ್ಲಿ ಬೇಸರ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + five =
Remember me
