ವಿಜಯಪುರ :ಮೂರು ಕೃಷಿ ಕಾಯ್ದೆಗಳನ್ನು ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸೆ.26ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ದೆಹಲಿಯಲ್ಲಿ ನಡೆದ ರೈತರ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ 2021ರ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದು, ಹುಸಿಗೊಳಿಸಿದ್ದಾರೆ. ಕನಿಷ್ಟ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಮಾಡಲು ಸಮಿತಿ ರಚಿಸಿದ್ದೇವೆ ಎನ್ನುತ್ತಲೇ ವರ್ಷಗಳ ಕಾಲ ಹೋರಾಟ ಮಾಡಿದ, ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿ ನಾಟಕವಾಡುತ್ತಿದ್ದಾರೆ. ಆದಕಾರಣ ದೇಶಾದ್ಯಂತ ರೈತ ಚಳವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ದಕ್ಷಿಣ ಭಾರತದ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ನೇತೃತ್ವದಲ್ಲಿ ಸೆ.25ರಂದು ಕಿಸಾನ್ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತಂದು, ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. 2022ರ ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಕಬ್ಬಿನ ಎಫ್‌ಆರ್‌ಪಿ ದರವನ್ನು ಪುನರ್ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ, ನ್ಯಾಯಯುತ ಕಬ್ಬಿನ ದರ ನಿಗದಿ ಮಾಡಬೇಕು. ಕೃಷಿ ಉತ್ಪನ್ನಗಳ ಹಾಗೂ ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು. ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ಕರೊನಾ ಲಾಕ್‌ಡೌನ್, ಅತಿವೃಷ್ಟಿ, ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ. ಆದ ಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ರೀತಿಯಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಫಸಲ್ ಬೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸಬೇಕು. ರಾಜ್ಯದಲ್ಲಿ ಅಂದಾಜು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿಯಿಂದ ರೈತರ ಬೆಳೆ ನಷ್ಟ ಆಗಿದೆ. ಕೇಂದ್ರ ತಂಡ ನಾಮ್ ಕೆ ವಾಸ್ತೆ ರೀತಿ ಪರಿಶೀಲನೆ ನಡೆಸಿ, ವರದಿ ನೀಡುವುದು ರೈತರಿಗೆ ಸಹಕಾರಿಯಲ್ಲ. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆ ಹಾನಿ ಆಗಿರುವ ಹಳ್ಳಿಗಳಿಗೆ ಭೇಟಿ ನೀಡಿ ನೈಜ ರೈತರ ಬೆಳೆ ನಷ್ಟ ಬಗ್ಗೆ ಸಮರೋಪಾದಿಯಲ್ಲಿ ಸಮೀಕ್ಷೆ ನಡೆಸಿ ನಷ್ಟದ ಅಂದಾಜಿನ ಸಂಪೂರ್ಣ ಪರಿಹಾರದ ನೀಡಲು ಮುಂದಾಗಬೇಕು. ರೈತರಿಗೆ ಭಿಕ್ಷೆ ರೂಪದ ಪರಿಹಾರ ಬೇಡ, ಜಿಲ್ಲಾ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾನಿಗೆ ಒಳಗಾದ ಹಳ್ಳಿಗಳಿಗೆ ಕೂಡಲೇ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಗುಂದಗಿ, ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಹೂಗಾರ, ಧರೆಪ್ಪ ಗೌಡ ಬಿರಾದಾರ, ಶಿವನಗೌಡ ಪಾಟೀಲ, ಸಿದ್ದಪ್ಪ ಹಿರೇಗೌಡ, ಸುಭಾಷ್ ಶಿರಬೂರ, ಬರಡನಪುರ ನಾಗರಾಜ್ಮುಂತಾದವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − ten =
Remember me
