ಬೆಂಗಳೂರು:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿಂಪಡೆಯಲು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಚಳವಳಿಗೆ ಇಳಿದಿದ್ದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ದರ ಹೆಚ್ಚಿರುವುದನ್ನು ಹೋಲಿಸಿ ಸಿಎಂ ಸಿದ್ದರಾಮಯ್ಯ ತಮ್ಮ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ.
ಆಡಳಿತ, ಪ್ರತಿಪಕ್ಷಗಳ ಪಟ್ಟು-ಬಿಗಿಪಟ್ಟು ಮಧ್ಯೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತೊಂದು ಅಸ ಪ್ರಯೋಗಿಸಿದ್ದಾರೆ. ಬೆಲೆ ಹೆಚ್ಚಳ ಸರ್ಮಥನೆಗೆ ಬಿಜೆಪಿ ಆಡಳಿತದ ರಾಜ್ಯಗಳನ್ನು ಹೋಲಿಸಿದ್ದಾಯಿತು. ಬೊಕ್ಕಸ ತುಂಬಿದ್ದರೆ ತೆಲಂಗಾಣ ಕಾಂಗ್ರೆಸ್ ಸರ್ಕಾರದ ಮಾದರಿ ರೈತರ ಸಾಲ ಮನ್ನಾ ಮಾಡಿ ಎಂಬ ಸವಾಲು ಹಾಕಿದ್ದಾರೆ.
ನೆರೆಯ ತೆಲಂಗಾಣದ ರೇವಂತರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೈತರ ಎರಡು ಲಕ್ಷ ರೂ. ಸಾಲ ಮನ್ನಾ ಮಾಡಲು ತೀರ್ಮಾನಿಸಿ, ಅಲ್ಲಿನ ರೈತರಿಗೆ ಅನುಕೂಲ ಮಾಡಿಕೊಡಲಿದೆ. ತೆಲಂಗಾಣ ಮಾದರಿಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸಿ ರಾಜ್ಯದಲ್ಲಿನ ರೈತರ ಸಾಲ ಮನ್ನಾ ಮಾಡಬೇಕು ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡಿದ್ದಿರಿ. ಹಾಗೆಯೇ ತೆಲಂಗಾಣದ ಕಾಂಗ್ರೆಸ್ ಸರ್ಕಾರದ ಮಾದರಿ ಅನುಸರಿಸಿ ಎಂದು ಕೆಣಕಿದ್ದಾರೆ.
ರಾಜ್ಯ ಬೊಕ್ಕಸ ಭರ್ತಿಯಾಗಿದೆ ಎಂದು ಹೇಳಿಕೊಂಡಾಗಿದೆ. ಹಣಕಾಸು ಪರಿಸ್ಥಿತಿ ಚೆನ್ನಾಗಿರುವುದೇ ನಿಜವಾಗಿದ್ದರೆ, ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ ರೈತರನ್ನು ಋಣಮುಕ್ತರನ್ನಾಗಿ ಮಾಡಿ ಎಂದಿರುವ ಆರ್.ಅಶೋಕ್, ನೇರವಾಗಿ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
