ಬೆಂಗಳೂರು:ಕೃಷಿಯನ್ನು ಲಾಭದಾಯಕವಾಗಿ ಪರಿವರ್ತಿಸಿ, ರೈತರನ್ನು ಸಬಲೀಕರಣ ಗೊಳಿಸಲು ಎಲ್ಲ ತಾಂತ್ರಿಕ, ವೈಜ್ಞಾನಿಕ ನೆರವನ್ನು ಪರಿಣಾಮಕಾರಿಯಾಗಿ ವರ್ಗಾವಣೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದರು.
ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ, ಜಲಾನಯನ ಇಲಾಖೆಗಳು, ವಿಶ್ವವಿದ್ಯಾನಿಲಗಳ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ರೈತರಿಗೆ ವಿವಿಧ ಯೋಜನೆಗಳ ನೆರವಿನ ಜತೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಿಶ್ವ ವಿದ್ಯಾನಿಲಯಗಳು ರೈತರಿಗೆ ಆಪ್ತವಾಗಬೇಕು, ಕೃಷಿ ವಿಜ್ಞಾನಿಗಳನ್ನು ತಯಾರು ಮಾಡುವುದರ ಜತೆಯಲ್ಲಿ ಯಶಸ್ವಿ ಸಂಶೋಧನೆಗಳ ಫಲವನ್ನು ಸಕಾಲದಲ್ಲಿ ರೈತರಿಗೆ ತಲುಪಿಸಬೇಕು ಎಂದರು.
ರೈತರಿಗೆ ಸಕಾಲದಲ್ಲಿ ಬೆಳೆ ವಿಮೆ ಹಣ ಒದಗಿಸಬೇಕು .ಇದಕ್ಕೆ ಇಲಾಖಾ ಅಧಿಕಾರಿಗಳು ವಿಮಾ ಕಂಪನಿಗಳ ಜತೆ ಸಮನ್ವಯ ಮಾಡಿ ಕೃಷಿಕರಿಗೆ ನೆರವಾಗಿ ಎಂದರು.
ಬೆಳೆ ಸಮೀಕ್ಷೆ ಶೇ.100 ರಷ್ಟು ಪೂರ್ಣ ಆಗಬೇಕು, ಬೆಳೆ ಹಾನಿ ವರದಿ ವೇಳೆ ಅಧಿಕಾರಿ, ಸಿಬ್ಬಂದಿ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು.
ಕೃಷಿ ವಿಚಕ್ಷಣಾ ದಳ ಚುರುಕಾಗಿ ಕೆಲಸ ಮಾಡಬೇಕು.ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಿ, ನಕಲಿ ರಸಗೊಬ್ಬರ ಬಿತ್ತನೆ ಬೀಜ ಮಾರಾಟ, ಸಾಗಾಟದ ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮವಹಿಸಿ ಎಂದು ನಿರ್ದೇಶನ ನೀಡಿದರು.
ರೈತರ ಅನುಕೂಲದ ದೃಷ್ಠಿಯಿಂದ ಕೃಷಿ ಯಾಂತ್ರೀಕರಣ, ಕೃಷಿ ಭಾಗ್ಯ ಯೋಜನೆ ಚುರುಕು ಮಾಡಿ. ಕೃಷಿ ಹಾಗೂ ಕಂದಾಯ ಇಲಾಖೆ ಅನುದಾನದಲ್ಲಿ ಈ ಸಾಲಿನಲ್ಲಿ ಒಟ್ಟು 32,000 ಕೃಷಿ ಹೊಂಡ ನಿರ್ಮಾಣ ಪೂರ್ಣ ಗೊಳಿಸಿ ಎಂದು ತಿಳಿಸಿದರು.
ನೆಟೆ ರೋಗ ಬಾಕಿ ಪರಿಹಾರ ಆದಷ್ಟು ಬೇಗ ರೈತರ ಖಾತೆಗೆ ವರ್ಗಾವಣೆ ಮಾಡಿ ಎಂದು ತಾಕೀತು ಮಾಡಿದರು. ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಜಿಲ್ಲೆಗಳ ಬಗ್ಗೆ ನೋಡಲ್ ಅಧಿಕಾರಿಗಳು ಕಾಲಮಿತಿಯೊಳಗೆ ಶೇ.100 ಗುರಿ ಸಾಧನೆಗೆ ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆರ್‌ಐಡಿಎ್ ಯೊಜನೆಯಡಿ ಅನುಮೋದನೆಗೊಂಡ ಕಾಮಗಾರಿಗಳು ವಿಳಂಬವಾಗಿವಾಗಿದ್ದು ಈಗಾಗಲೇ ಮುಕ್ತಾಯ ಹಂತದಲ್ಲಿ ಇರುವ ಕಟ್ಟಡಗಳನ್ನು ಪೂರ್ಣಗೊಳಿಸಿ ಸೇವೆಗೆ ಬಳಸಿಕೊಳ್ಳಿ ಎಂದು ಚಲುವರಾಯಸ್ವಾಮಿ ಹೇಳಿದರು
ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಅನ್ಬುಕುಮಾರ್, ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಡಾ. ಗಿರೀಶ್, ಬಿ.ವೈ.ಶ್ರೀನಿವಾಸ್, ಕೃಷಿ ನಿರ್ದೇಶಕ ಡಾ ಪುತ್ರ, ಬೆಂಗಳೂರು ಕೃಷಿ ವಿವಿ ಕುಲಪತಿ ಸುರೇಶ್, ಕೃಷಿ ಸಚಿವರು ಅಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 1 =
Remember me
