ಬೆಂಗಳೂರು:ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ರೈತ, ಕಾರ್ಮಿಕ, ಕಾಂಗ್ರೆಸ್​, ಜೆಡಿಎಸ್​, ಮಹಿಳಾ ಸಂಘ, ಡಿವೈಎಫ್ಐ ಸೇರಿದಂತೆ ಹಲವು ಸಂಘಟನೆಗಳು ಬೀದಿಗಳಿದು ಪ್ರತಿಭಟನೆ ನಡೆಸಿವೆ.
ಚಾಮರಾಜನಗರದಲ್ಲಿ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆಗಿಳಿದ ರೈತ, ಕಾರ್ಮಿಕ ಹಾಗೂ ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು. ಬಳ್ಳಾರಿಯಲ್ಲಿ ವಿವಿಧ ರೈತಪರ ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಶವಯಾತ್ರೆ ಮಾಡುವ ಮೂಲಕ ಅಣುಕಿಸಿದರು. ಶವಗಳ ಆಕೃತಿ ಮುಂದೆ ಬಿಕ್ಕಿ-ಬಿಕ್ಕಿ ಅತ್ತು ವ್ಯಂಗ್ಯವಾಡಿದರು. ರೈತರ ಮರಣ ಶಾಸನದಂತಿರೋ ಕಾಯ್ದೆಯನ್ನು ಅನುಷ್ಠಾನಕ್ಕೆ ತರಬೇಡಿ ಎಂದು ಆಗ್ರಹಿಸಿದರು.ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು… ಮಳೆಯಲ್ಲೇ ಬೃಹತ್​ ಪ್ರತಿಭಟನೆ
ರೈತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಧಾರವಾಡದ ರಾಯಪುರದಲ್ಲಿ ಮಾಜಿ ಶಾಸಕ ಎನ್.ಎಚ್.‌ ಕೋನರೆಡ್ಡಿ ರೈತರ ಹೋರಾಟಕ್ಕೆ ಸಾಥ್​ ನೀಡಿದರು. ಶುಕ್ರವಾರ ಕೆಲ ಪರೀಕ್ಷೆಗಳಿವೆ. ಹಾಗಾಗಿ ಇಂದಿನ ಬದಲಿಗೆ ಸೋಮವಾರ ಕರ್ನಾಟಕದಲ್ಲಿ ಬಂದ್ ಮಾಡುತ್ತಿದ್ದೇವೆ. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಅಂದು ಬಂದ್ ಆಗಲಿವೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನ ಕರ್ನಾಟಕದ ಗಡಿ ಗೋಪುರದ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಟಾಳ್ ನಾಗರಾಜ್​, ಸಾರಾಗೋವಿಂದು, ಮಂಜುನಾಥ ದೇವು ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆ ಕಾವು ತುಸು ಹೆಚ್ಚಾಗಿದೆ.
ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಭೀಮರಾವ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರಗಳ ವಿರುದ್ಧ ರೈತರು ಘೋಷಣೆ ಕೂಗಿದರು. ಹಾವೇರಿಯಲ್ಲಿ ತಮಟೆ ಬಾರಿಸುವ ಮೂಲಕ ಆಕ್ರೋಶ ಹೊರಹಾಕಿದರು. ಬಾಗಲಕೋಟೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಯಾದಗಿರಿ, ತುಮಕೂರು, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಗದಗ, ಹುಬ್ಬಳ್ಳಿ ಸೇರಿದಂತೆ ಎಲ್ಲೆಡೆಯೂ ಸಾಂಕೇತಿಕವಾಗಿ ಪ್ರತಿಭಟನೆ, ಪಾದಯಾತ್ರೆ ನಡೆದಿದೆ.
ಹಿಂದಿನ ಸರ್ಕಾರಗಳ ಗೊಂದಲದ ಕಾನೂನು ಪರಿಷ್ಕರಿಸಿ ರೈತ ಕಲ್ಯಾಣಕ್ಕಾಗಿ ಎನ್​ಡಿಎ ಸುಧಾರಣೆ ತಂದಿದೆ: ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
