ಬೆಂಗಳೂರು:ಕರೊನಾ ಭೀತಿ ನಡುವೆಯೂ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇನ ಆಂಭವಾಗಿದೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ 30ಕ್ಕೂ ಹೆಚ್ಚು ಸಂಘಟನೆಗಳು ಸಿಡಿದೆದ್ದು ಬೀದಿಗಳಿದು ಪ್ರತಿಭಟಿಸುತ್ತಿವೆ.
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಸುಗ್ರೀವಾಜ್ಞೆ, ವಿದ್ಯುತ್​ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ಕುರುಬೂರು ಶಾಂತಕುಮಾರ್​ ನೇತೃತ್ವದಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಮೆಜೆಸ್ಟಿಕ್​ ಬಳಿಯ ರೈಲ್ವೆ ನಿಲ್ದಾಣದಿಂದ ಹೊರಟ ಬೃಹತ್​ ಪ್ರತಿಭಟನಾ ಮೆರವಣಿಗೆಗೆ ರಾಜ್ಯದ 32 ಸಂಘಟನೆಗಳು ಸಾಥ್​ ನೀಡಿವೆ.ಇದನ್ನೂ ಓದಿರಿವಿಧಾನಮಂಡಲ ಕಲಾಪ ಆರಂಭ, 60ಕ್ಕೂ ಹೆಚ್ಚು ಶಾಸಕರು ಗೈರು?
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಸುಗ್ರೀವಾಜ್ಞೆ, ವಿದ್ಯುತ್​ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ಮಳೆಯನ್ನೂ ಲೆಕ್ಕಿಸದೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಅನ್ನದಾತರು, ಈ ಮೂರು ಕಾಯ್ದೆಯನ್ನೂ ಕೈಬಿಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ರೈತರ ಹೋರಾಟಕ್ಕೆ ಸರ್ಕಾರ ಮಣಿಯಬೇಕು. ಒಂದು ವೇಳೆ ರೈತರಿಗೆ ಮಾರಕವಾಗಿರುವ ಬಿಲ್​ಗಳನ್ನು ಮಂಡಿಸದ್ದೇ ಆದಲ್ಲಿ ಕಾನೂನು ಭಂಗ, ಜೈಲ್​ ಭರೋ ಚಳವಳಿಯನ್ನೂ ಮಾಡಲು ಸಿದ್ಧರಿದ್ದೇವೆ ಎಂದು ರೈತ ಮುಖಂಡರು ಎಚ್ಚರಿಸಿದರು.
ಮಧ್ಯಾಹ್ನ 12.50ರ ಸುಮಾರಿಗೆ ರೈತರ ಪ್ರತಿಭಟನಾ ರ್ಯಾಲಿ ರೇಸ್​ಕೊರ್ಸ್​ ರಸ್ತೆ ದಾಟಿತ್ತು. ಮೆಜೆಸ್ಟಿಕ್​, ಫ್ರೀಡಂ ಪಾರ್ಕ್, ಆನಂದರಾವ್​ ಸರ್ಕರ್​, ರೇಸ್​ಕೋರ್ಸ್​ ರಸ್ತೆಯಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನ ಜಮಾಯಿಸಿದ್ದರಿಂದ ಎಲ್ಲೆಡೆ ಪೊಲೀಸ್​ ಬಂದೋಬಸ್ತ್ ಏರ್ಪಡಿಸಲಾಗಿದೆ.
3 ದಿನಕ್ಕೆ ಅಧಿವೇಶನ ಮೊಟಕು? ಸಿಎಂ ವಿರುದ್ಧ ಪ್ರತಿಪಕ್ಷಗಳು ಗರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
