ಬೆಂಗಳೂರು: ತೋಟಗಾರಿಕಾ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದ್ದು, ಬೆಳೆ ವಿಮೆ ನೋಂದಣಿ ಅವಧಿಯನ್ನು ಜು.10ರವರೆಗೆ ವಿಸ್ತರಿಸಿದೆ.
ರಾಜ್ಯದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯು ವಿಮಾ ಕಂಪನಿಗಳ ಒಪ್ಪಿಗೆಯೊಂದಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗಡುವು ವಿಸ್ತರಿಸಲು ಮನವಿ ಮಾಡಿಕೊಂಡಿತ್ತು. ಪ್ರಸ್ತಾವನೆಗೆ ಕೇಂದ್ರ ತ್ವರಿತವಾಗಿ ಸ್ಪಂದಿಸಿದೆ. ನಿಗದಿತ ಬೆಳೆಗಳು, ಪ್ರೀಮಿಯಂ ದರ ಹಾಗೂ ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ.
ಇದನ್ನೂ ಓದಿ:4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
ಸಾಲಗಾರರಲ್ಲದ ರೈತರು ಬ್ಯಾಂಕ್ ಅಥವಾ ಗೊತ್ತುಪಡಿಸಿದ ವಿಮಾ ಏಜೆಂಟರ ಮೂಲಕ ಕಂತು ಪಾವತಿ ಮಾಡಬಹುದಾಗಿದೆ. ಸಾಲಗಾರ ರೈತರ ವಿಮಾ ಕಂತನ್ನು ಸಾಲದ ಖಾತೆಯಲ್ಲಿ ಬ್ಯಾಂಕ್​ಗಳು ಕಡಿತಗೊಳಿಸಿ, ಜು.15ರೊಳಗೆ ಆಯಾ ವಿಮಾ ಕಂಪನಿಗಳಿಗೆ ಭರಿಸಬೇಕು ಎಂದು ಸೂಚಿಸಲಾಗಿದೆ.
ಬಿಜೆಪಿ ವರ್ಚುವಲ್ ರ‍್ಯಾಲಿ: 1.40 ಕೋಟಿ ಜನರ ಭೇಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + six =
Remember me
