ತುಮಕೂರು:ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಇಬ್ಬರೂ ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್​ನಲ್ಲಿ ಈ ಭಾರಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಸುಂಕದಕಟ್ಟೆ ಬಳಿ ವಾಸವಾಗಿದ್ದ ತಿರುಮಲೇಗೌಡ (50), ಚಂದನ (20) ಮೃತ ದುರ್ದೈವಿಗಳು. ಇವರು ಇಂದು ತಮ್ಮ ಊರಾದ ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿಯ ನೆಟ್ಟಿಗೆರೆ ಗ್ರಾಮದಲ್ಲಿ ಹಬ್ಬ ಮುಗಿಸಿಕೊಂಡು ಬೈಕ್​​ನಲ್ಲಿ ಬೆಂಗಳೂರಿಗೆ ಮರಳುವಾಗ ಈ ಅಪಘಾತ ಸಂಭವಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬನ್ನಿಮರದ ಕಟ್ಟೆ ಬಳಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ತಿರುಮಲೇಗೌಡ ಸ್ಥಳದಲ್ಲೇ ಸಾವಿಗೀಡಾದರೆ, ಪುತ್ರಿ ಚಂದನಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಳು. ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನಿಸಲಾಗಿದ್ದು, ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?
ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × two =
Remember me
