ಬೆಂಗಳೂರು:ಅದೊಂದು ದುರಂತ ಸಂಭವಿಸದೇ ಇದ್ದಿದ್ದರೆ ಮುಂದಿನ ವಾರ ಈ ಯುವತಿ ನಿಶ್ಚಿತಾರ್ಥದ ಸಂಭ್ರಮದಲ್ಲಿ ಇರುತ್ತಿದ್ದಳು. ಆದರೆ ಮಾರ್ಗಮಧ್ಯೆ ಸಂಭವಿಸಿದ ಅದೊಂದು ಸ್ಫೋಟ ಆಕೆಯ ಖುಷಿಗೇ ಬೆಂಕಿ ಇಟ್ಟಿದ್ದು, ಅಪ್ಪ-ಮಗಳು ಇಬ್ಬರೂ ಜೀವನ್ಮರಣ ಹೋರಾಟ ನಡೆಸುವಂತಾಗಿದೆ.
ನಿಶ್ಚಿತಾರ್ಥಕ್ಕೆ ಹಾಲ್ ಬುಕ್ ಮಾಡಿ ಬರುತ್ತಿದ್ದಾಗ ಮಾರ್ಗಮಧ್ಯೆ ವಿದ್ಯುತ್ ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡಿದ್ದು, ಶಿವರಾಜ್ ಹಾಗೂ ಅವರ ಪುತ್ರಿ ಚೈತನ್ಯ (18) ಇಬ್ಬರಿಗೂ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇವರು ಮಂಗನಹಳ್ಳಿ ಬಳಿ ಹಂಪ್​ ಹತ್ತಿರ ವಾಹನದ ವೇಗ ತಗ್ಗಿಸಿದ ಸಂದರ್ಭದಲ್ಲೇ ಅಲ್ಲಿದ್ದ ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡಿದೆ. ಆಗ ಅದರಲ್ಲಿನ ಆಯಿಲ್ ಸಮೇತ ಬೆಂಕಿ ಸಿಡಿದಿದ್ದು, ಇಬ್ಬರಿಗೂ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡು ಗಾಯಗೊಂಡ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಯಾಣ ಮಂಟಪ ಬುಕ್ ಮಾಡಿ, ಒಂದಿಷ್ಟು ಬಟ್ಟೆ ಖರೀದಿಸಿಕೊಂಡು ಬರುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ. ರಾಜಧಾನಿ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಈ ಅವಘಡಕ್ಕೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ಬೆಸ್ಕಾಂ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.
ನಮ್ಮದೇ ಮೊದಲ ‘ದಸರಾ’ ಎಂದ ಶರ್ಮಿಳಾ; ತೆಲುಗು ನಿರ್ಮಾಪಕರ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು..

ಮುತ್ತಲ್ಲೂ ಮೋಸ: ಐನೂರಕ್ಕೂ ಹೆಚ್ಚು ಮಂದಿಗೆ ವಂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + sixteen =
Remember me
