ಚಿಕ್ಕಬಳ್ಳಾಪುರ:ಎರಡು ದ್ವಿಚಕ್ರ ವಾಹನಗಳಿಗೆ ಟೆಂಪೋ ಒಂದು ಡಿಕ್ಕಿ ಹೊಡೆದಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಎರಡು ದ್ವಿಚಕ್ರ ವಾಹನಗಳಿಗೆ ಟೆಂಪೋ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟೆಂಪೋಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.
ಇದನ್ನೂ ಓದಿ:ಒಂದು ವರ್ಷದ ಅಂತರ.. ಅದೇ ಜಾಗ.. ಒಂದೇ ಥರದಲ್ಲಿ ಸಂಬಂಧಿಕರಿಬ್ಬರ ಸಾವು!
ಕುರುಬೂರು ಗ್ರಾಮದ ಶ್ರೀರಾಮ್ (35) ಹಾಗೂ ಅವರ ಪತ್ನಿ ಶ್ಯಾಮಲಾ (30) ಸಾವಿಗೀಡಾದವರು. ಇವರು ಮೂವರು ಮಕ್ಕಳೊಂದಿಗೆ ಪ್ರತ್ಯೇಕ ದ್ವಿಚಕ್ರವಾಹನದಲ್ಲಿ ಸಾಗುತ್ತಿದ್ದರು. ಟೆಂಪೋ ಎರಡೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ವೀರಶೈವ ಲಿಂಗಾಯತ ಸಮುದಾಯ ಒಬಿಸಿಗೆ ಸೇರಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವಂತೆ ಹಕ್ಕೊತ್ತಾಯ ಸಭೆ
ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಳಿಕ ಈ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಟೆಂಪೋ ಉರಿಯಲಾರಂಭಿಸಿದ್ದು, ಚಾಲಕ ಪರಾರಿಯಾಗಿದ್ದಾನೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ.
ಯಥಾಸ್ಥಿತಿ ಕಾಪಾಡಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಮದ್ಯಪಾನಪ್ರಿಯರ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
