ಹುಬ್ಬಳ್ಳಿ:ಲಾಕ್​ಡೌನ್​ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ತೆರೆದಿದ್ದ ಅಂಗಡಿಯನ್ನು ಮುಚ್ಚಿ ಎಂದಿದ್ದಕ್ಕೆ ಅಂಗಡಿ ಮಾಲೀಕ ಹಾಗೂ ಆತನ ಇಬ್ಬರು ಮಕ್ಕಳು ಸೇರಿ ಪೊಲೀಸ್ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇಂಥದ್ದೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಇಂದು ನಡೆದಿದೆ.
ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈರಪ್ಪ ಹನುಮಸಾಗರ ಎಂಬವರು ಬೆಳಗ್ಗೆ 10 ಗಂಟೆ ಕಳೆದರೂ ಅಂಗಡಿಯನ್ನು ಮುಚ್ಚದೆ ತೆರೆದೇ ಇರಿಸಿದ್ದರು. ಸಮಯ ಮೀರಿದೆ, ಅಂಗಡಿಯನ್ನು ಮುಚ್ಚಿ ಎಂದು ಆ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೆಬಲ್​ ಗಿರೀಶ್ ತಿಪ್ಪಣ್ಣವರ ಹೇಳಿದ್ದಾರೆ.
ಇದನ್ನೂ ಓದಿ:ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!
ಇದರಿಂದ ಸಿಟ್ಟಾದ ಈರಪ್ಪ ಪೊಲೀಸ್ ಪೇದೆಗೆ ಅಸಭ್ಯ ಪದಗಳಿಂದ ನಿಂದಿಸಿದ್ದಾರೆ. ಮಾತ್ರವಲ್ಲ ತಮ್ಮಿಬ್ಬರು ಪುತ್ರರೊಂದಿಗೆ ಪೊಲೀಸ್ ಮೇಲೆರಗಿ ಹಲ್ಲೆ ನಡೆಸಿ, ಸಮವಸ್ತ್ರ ಹರಿದು ಹಾಕಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರೂ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…

ರಸ್ತೆಯಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ!

ಒಂದೇ ಮನೆಯ ನಾಲ್ವರು ಕರೊನಾಗೆ ಬಲಿ; 2- 3 ದಿನಗಳ ಅಂತರದಲ್ಲಿ ಇಬ್ಬಿಬ್ಬರ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
