ಬೆಂಗಳೂರು:ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆಯಿಂದಲೇ ಮಗನನ್ನೇ ಗುಂಡು ಹಾರಿಸಿ ಕೊಲೆ ಮಾಡಿ ಘಟನೆ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​ನ ಮನೆಯಲ್ಲಿ ವಾಸವಾಗಿರುವ ಸುರೇಶ್ ಎಂಬವರೇ ತಮ್ಮ ಮಗ ನರ್ತನ್ ಬೋಪಣ್ಣ (32) ಅವರನ್ನು ಕೊಲೆ ಮಾಡಿದವರು.
ಇದನ್ನೂ ಓದಿ:Gold, Silver Price; ಗಣರಾಜ್ಯೋತ್ಸವದ ಸಂಭ್ರಮ.. ಏರಿಕೆಯಾದ ಚಿನ್ನ,ಬೆಳ್ಳಿ ಬೆಲೆ..
ನರ್ತನ್‌ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಮನೆಯಲ್ಲಿ ತಾಯಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಸುರೇಶ್‌ಗೆ ಕುಡಿತದ ಹುಚ್ಚು ವಿಪರೀತವಾಗಿದ್ದು, ಇದೇ ಕಾರಣದಿಂದ ಅವರು ತಮ್ಮ ಮಗನನ್ನೇ ಕೊಲೆ ಮಾಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ನರ್ತನ್‌ ಬೋಪಣ್ಣ ಕರೇಕಲ್‌ನ ಮನೆಯಲ್ಲಿ ತಂದೆ ಸುರೇಶ್‌ ಮತ್ತು ತಾಯಿ ಜತೆ ವಾಸವಾಗಿದ್ದರು. ಇವರು ಕೊಡಗಿನ ಮೂಲದವರಾದರು ಎನ್ನಲಾಗಿದೆ.

ಗುರುವಾರ ಸಂಜೆ ಕುಡಿಯಲು ಹಣ ಕೇಳಿ ಹಿಂಸೆ ನೀಡಿದ್ದಾನೆ. ಇದನ್ನೆಲ್ಲ ನೋಡಿದ ನರ್ತನ್‌ ತನ್ನ ತಂದೆಯನ್ನು ಒಂದು ಕೋಣೆಯೊಳಗೆ ತಳ್ಳಿ ಬಾಗಿಲು ಹಾಕಿದ್ದರು. ಕೋಣೆಯ ಒಳಗಿನಿಂದಲೇ ಬೆದರಿಕೆ ಹಾಕುತ್ತಿದ್ದರು ಸುರೇಶ್‌. ಮಗ ತನ್ನನ್ನು ಕೋಣೆಯೊಳಗೆ ಹಾಡಿ ಹಾಕಿದ್ದರಿಂದ ಸಿಟ್ಟಿಗೆದ್ದ ಸುರೇಶ್​ ಅವರು ತಮ್ಮ ಬಳಿ ಇದ್ದ ಲೈಸೆನ್ಸ್‌ ಹೊಂದಿದ ಸಿಂಗಲ್ ಬ್ಯಾರಲ್ ಗನ್ ಅನ್ನು ಹೊರಗೆ ತೆಗೆದು ನೇರವಾಗಿ ಗುಂಡು ಹೊಡೆದು ಸಾಯಿಸಿದ್ದಾರೆ.
ಆ ಕೋಣೆಯ ಬಾಗಿಲು ಹಾಕಿತ್ತು. ಅದನ್ನು ಒಡೆಯಲೆಂದು ಅವರು ಬಾಗಿಲಿಗೆ ಗುಂಡು ಹಾರಿಸಿದರು. ಹಾಗೆ ಹಾರಿಸಿದ ಗುಂಡು ಬಾಗಿಲನ್ನು ಒಡೆದುದಲ್ಲದೆ ನೇರವಾಗಿ ಹೊರಗೆ ಕುಳಿತಿದ್ದ ನರ್ತನ್ ಬೋಪಣ್ಣ ಅವರ ತೊಡೆಯ ಮೇಲ್ಭಾಗಕ್ಕೆ ಹೊಕ್ಕಿದೆ ಎನ್ನಲಾಗಿದೆ.
ಹೀಗೆ ಗುಂಡು ಕಾಲನ್ನು ಹೊಕ್ಕುತ್ತಿದ್ದಂತೆಯೇ ನರ್ತನ್‌ ತನ್ನ ಸಹೋದರಿಗೆ ಕರೆ ಮಾಡಿ ತಂದೆ ನನ್ನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದ. ಸಹೋದರಿ ಸಂಬಂಧಿಕರೊಬ್ಬರನ್ನ ಮನೆ ಬಳಿ ಹೋಗುವಂತೆ ಹೇಳಿದ್ದರು. ಆದರೆ, ಅವರೆಲ್ಲ ಬಂದು ನೋಡಿದಾಗ ಸುಮಾರು ಮೂರು ಗಂಟೆ ಆಗಿತ್ತು. ಅಷ್ಟೂ ಹೊತ್ತು ರಕ್ತ ಬಸಿದುಹೋಗಿ ನಿತ್ರಾಣಗೊಂಡಿದ್ದ ನರ್ತನ್ ಏಳುವ ಸ್ಥಿತಿಯಲ್ಲೇ ಇರಲಿಲ್ಲ. ಆ ಬಳಿಕ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನರ್ತನ್​ ಸಾವನ್ನಪ್ಪಿದ್ದಾರೆ.
ಮೂರು ಗಂಟೆ ನೆತ್ತರ ಮಗುವಲ್ಲೇ ಬಿದ್ದಿದ್ದ ಮಗ ನರ್ತನ್‌ ನೋಡುತ್ತಾ ತಾಯಿ ಹಾಸಿಗೆಯಲ್ಲೇ ಅಸಹಾಯಕರಾಗಿ ಮಲಗಿದ್ದರು. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಸಭೆ ಚುನಾವಣೆ: INDIA ಮೈತ್ರಿಕೂಟಕ್ಕೆ ಎಎಪಿ ಅಘಾತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seventeen =
Remember me
