ಉತ್ತರಕನ್ನಡ:ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ತನ್ನ ತಂದೆಯನ್ನೇ ಕೊಲೆ ಮಾಡಿದ ಪ್ರಕರಣವೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಈ ಭೀಕರ ಕೊಲೆ ನಡೆದುಹೋಗಿದೆ.
ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿ ಗ್ರಾಮದಲ್ಲಿ ಕೊಲೆ ನಡೆದಿದೆ. ಪಾಂಡುರಂಗ ಮೇಸ್ತ (62) ಕೊಲೆಯಾದ ದುರ್ದೈವಿ. ಈತನ ಪುತ್ರ ಭರತ್ ಮೇಸ್ತ (26) ಕೊಲೆ ಆರೋಪಿ. ಮಾನಸಿಕ ಅಸ್ವಸ್ಥನಾಗಿದ್ದ ಈತ ಕೆಲವು ದಿನಗಳಿಂದ ಮಾತ್ರೆ ಸೇವಿಸಲು ಹಠ ಮಾಡುತ್ತಿದ್ದು, ಇಂದು ತಂದೆಯನ್ನೇ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!
ತಂದೆ-ಮಗನ ನಡುವೆ ನಿತ್ಯ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ತಂದೆ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಾಕುವಿನಿಂದ ಇರಿದದ್ದಲ್ಲದೆ, ಸಲಾಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಹೊನ್ನಾವರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 1 =
Remember me
