ಚಾಮರಾಜನಗರ:ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿಗೆ ಮಚ್ಚಿನೇಟು ಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಿ.ಜಿ ಪಾಳ್ಯದಲ್ಲಿ ನಡೆದಿದೆ.
ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಅವರು ವಿರೋಧಿಸಿದ್ದರು. ಮನೆಯವರ ತೀವ್ರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಗೆ ಮುಂದಾಗಿದ್ದರು. ಇದರಿಂದ ಸಿಟ್ಟಿಗೆದ್ದ ಮನೆಯವರು ಆಕೆಯ ತಂದೆ ಹಾಗೂ ಅಣ್ಣನೇ ಗಂಭೀರ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ:ರಹಸ್ಯ ಮಾಹಿತಿ ಮೇರೆಗೆ ವ್ಯಕ್ತಿಯ ಬ್ಲೂಟೂತ್​ ಸ್ಪೀಕರ್ ಚೆಕ್​ ಮಾಡಿದ ಅಧಿಕಾರಿಗಳಿಗೆ ಸಿಕ್ಕಿದ್ದೇನು?
ಗ್ರಾಮದ ಮೆಡಿಕಲ್ ಸ್ಟೋರ್ ಮುಂಭಾಗದಲ್ಲಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಧನಲಕ್ಷ್ಮೀ ಮೇಲೆ ಹಲ್ಲೆ ಮಾಡಲು ಆಕೆಯ ತಂದೆ ಶಿವಸ್ವಾಮಿ ಹಾಗೂ ಅಣ್ಣ ಮಹೇಂದ್ರ ಮಚ್ಚು, ಕುಡಗೋಲು ಹಿಡಿದು ಬಂದಿದ್ದರು. ಅಲ್ಲದೆ ಮೆಡಿಕಲ್ ಮುಂಭಾಗದಲ್ಲಿದ್ದ ಧನಲಕ್ಷ್ಮಿ ಮೇಲೆ ಕುಡುಗೋಲಿನಿಂದ ಏಕಾಏಕಿ ಹಲ್ಲೆ ಮಾಡಿದ್ದಾರೆ.
ಹಲ್ಲೆಯ ಪರಿಣಾಮ ಯುವತಿ ಕೈಯ 4 ಬೆರಳುಗಳೇ ಕಟ್ ಆಗಿವೆ. ಸದ್ಯ ಯುವತಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅಲ್ಲದೆ ಪ್ರಾಣ ರಕ್ಷಿಸುವಂತೆ ಅಳಲು ತೋಡಿಕೊಂಡಿದ್ದಾಳೆ. ಘಟನೆ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
