ಮಂಗಳೂರು:ಮೊನ್ನೆಮೊನ್ನೆಯಷ್ಟೇ ಫಾದರ್ಸ್ ಡೇ ನಡೆದಿದ್ದು, ಬಹಳಷ್ಟು ಮಂದಿ ತಂದೆಯ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ ಖುಷಿ ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಪುತ್ರನಿಗೆ ಅದಾಗಿ ಎರಡೇ ದಿನಕ್ಕೆ ತಂದೆ ಎಸಗಿದ ಕೃತ್ಯವೊಂದು ಕಹಿನೆನಪಾಗಿಯೇ ಉಳಿದು ಬಿಡುವಂಥ ಪ್ರಕರಣವೊಂದು ವರದಿಯಾಗಿದೆ.
ತಂದೆ-ಮಗ ಇಬ್ಬರೂ ಕ್ಷುಲ್ಲಕ ಕಾರಣಕ್ಕಾಗಿ ಪರಸ್ಪರ ಜಗಳವಾಡಿಕೊಂಡಿದ್ದು, ಕೊನೆಗೆ ಅದು ಮಗನ ಮೇಲೆ ಅಪ್ಪ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವ ಮಟ್ಟಕ್ಕೆ ಹೋಗಿದೆ. ಮಂಗಳೂರು ತಾಲೂಕಿನ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ನಿವಾಸಿ ವಿಶ್ವನಾಥ್ ಶೆಟ್ಟಿ ಎಂಬ 52 ವರ್ಷದ ವ್ಯಕ್ತಿ ತನ್ನ ಮಗ 25 ವರ್ಷದ ಸ್ವಾಮಿತ್ ಶೆಟ್ಟಿ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಇಂದು ಒಂದು ಸೆಕೆಂಡ್​ನಲ್ಲಿ ಹಾಕಿಸಿದ ಲಸಿಕೆ ಎಷ್ಟು ಗೊತ್ತೇ!?
ಇಬ್ಬರೂ ದನಗಳನ್ನು ಸಾಕಿ ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದು, ಹಸುಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಮಗನಿಗೆ ಹೊಡೆದು, ಬಳಿಕ ಕೋಣೆಯೊಳಗೆ ಕೂಡಿ ಹಾಕಿದ ವಿಶ್ವನಾಥ್ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ. ಸುಟ್ಟಗಾಯಗಳಿಗೆ ಒಳಗಾಗಿರುವ ಸ್ವಾಮಿತ್​ ಶೆಟ್ಟಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರೊನಾ ಮೂರನೇ ಅಲೆಯನ್ನು ತಡೆಯಬಹುದಂತೆ!; ಅದಕ್ಕಾಗಿ ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಹಾವು!; ಲಾಕ್​ಡೌನ್​ ಇಫೆಕ್ಟ್​, ಚಾಲಕರಲ್ಲಿ ಭಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 14 =
Remember me
