ತುಮಕೂರು:ರಾಜ್ಯದಲ್ಲಿ ಕಾಡಿನಿಂದ ನಾಡಿಗೆ ಚಿರತೆಗಳು ಬರುತ್ತಿರುವ ಪ್ರಕರಣ ದಿನವೂ ಅಲ್ಲೊಂದು ಇಲ್ಲೊಂದರಂತೆ ಕೇಳಿ ಬರುತ್ತಿದೆ. ಹೀಗಾಗಿ ಬೆಂಗಳೂರಿನ ಕೆಲವು ಭಾಗದವರೂ ಸೇರಿದಂತೆ ರಾಜ್ಯದ ಹಲವೆಡೆ ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಮೂರ್ನಾಲ್ಕು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ ಪಾರ್ಕಿಂಗ್ ಸ್ಥಳಕ್ಕೂ ಚಿರತೆ ಬಂದು ಹೋದ ಪ್ರಕರಣ ನಡೆದಿದೆ. ಇದೀಗ ಬಾಲಕಿಯೊಬ್ಬಳು ಚಿರತೆಯಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಪ್ರಸಂಗ ನಡೆದಿದೆ.
ಇದನ್ನೂ ಓದಿ:12 ವರ್ಷಗಳಿಂದ ಇನ್ಶೂರೆನ್ಸ್ ಇಲ್ಲದ ವಾಹನದಲ್ಲಿ ಪೊಲೀಸರ ಡ್ಯೂಟಿ; ಸ್ಥಳೀಯ ವ್ಯಕ್ತಿ ಅಧಿಕಾರಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ!
ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿಯಲ್ಲಿ ಮಂಗಳವಾರ ಸಂಜೆ ಈ ಪ್ರಕರಣ ನಡೆದಿದ್ದು, ಲೇಖನ ಎಂಬ ಏಳು ವರ್ಷದ ಬಾಲಕಿ ಚಿರತೆಗೆ ಬಲಿಯಾಗುವುದರಿಂದ ಪಾರಾಗಿದ್ದಾಳೆ. ವಿಶೇಷವೆಂದರೆ ಈಕೆಯ ತಂದೆಯೇ ಇವಳನ್ನು ರಕ್ಷಿಸಿದ್ದಾರೆ. ತಂದೆ ರಾಕೇಶ್ ಚಿರತೆಯನ್ನೇ ಎದುರಿಸಿ ಮಗಳನ್ನು ರಕ್ಷಣೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
ಮಂಗಳವಾರ ಸಂಜೆ ಮನೆಯ ಅಂಗಳದಲ್ಲಿ ಲೇಖನ ಆಟ ಆಡುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ತಂದೆ ರಾಕೇಶ್ ಚಿರತೆಯನ್ನು ಎದುರಿಸಿ ಜೋರಾಗಿ ಕೂಗಿ, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಬಾಲಕಿಯನ್ನು ಬಿಟ್ಟು ಹೋಗಿದೆ. ಆಕೆಯ ಕಾಲಿಗೆ ಪರಚಿದ ಗಾಯಗಳಾಗಿವೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಧಿಕಾರಕ್ಕೆ ಬಂದರೆ ಒಬಿಸಿಯವರಿಗೇ ಸಿಎಂ ಪಟ್ಟ: ಪ್ರಧಾನಿ ಮೋದಿ ಭರವಸೆ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − three =
Remember me
