ಬೆಂಗಳೂರು:ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ತಂದೆಯೇ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಕವನ (20) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ಮಂಜುನಾಥ್​ (47) ಪೊಲೀಸರಿಗೆ ಶರಣಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.
ಆರೋಪಿ ಮಂಜುನಾಥ್​ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಇದರ ಬೆನ್ನಲ್ಲೇ ಹಿರಿ‌ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:VIDEO| ಒಂದೇ ಎಸೆತದಲ್ಲಿ 13 ರನ್​ ಗಳಿಸಿ ವಿಶಿಷ್ಟ ಸಾಧನೆ ಮಾಡಿದ ನ್ಯೂಜಿಲೆಂಡ್ ಬ್ಯಾಟರ್
ಹಿರಿಯ ಮಗಳ ಪ್ರೀತಿ ವಿಚಾರ ತಿಳಿದು ತೀವ್ರವಾಗಿ ನೊಂದಿದ್ದ ಮಂಜುನಾಥ್​ ಮಗಳಿಗೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದರು. ಇದೇ ವಿಚಾರವಾಗಿ ತಂದೆ ಮಗಳ ನಡುವೆ ಬುಧವಾರ ರಾತ್ರಿ ಜಗಳವೂ ಸಹ ನಡೆದಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆರೋಪಿ ಮಂಜುನಾಥ್​ ಮಗಳ ಕತ್ತನ್ನು ಚಾಕುವಿನಿಂದ ಸೀಳಿ ಕೈ-ಕಾಲು ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಬಳಿಕ ವಿಶ್ವನಾಥಪುರ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಘಟನೆ ನಂತರ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ತಿಂಗಳು ಕೋಲಾರ ಜಿಲ್ಲೆಯಲ್ಲಿ ವರದಿಯಾದ ಎರಡು ಮರ್ಯಾದಾ ಹತ್ಯೆಗಳ ಬೆನ್ನಲ್ಲೇ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 1 =
Remember me
