ಮಂಡ್ಯ:ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ.
ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಎನ್ನಿಸಿಕೊಂಡಿತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ಇದನ್ನೂ ಓದಿ:ಎಸ್​ಐ ಅಕ್ರಮ ನ್ಯಾಯಾಂಗ ತನಿಖೆ?: ಸಚಿವ ಸಂಪುಟ ಸಭೆಯಲ್ಲೂ ಚರ್ಚೆ; ಶೀಘ್ರವೇ ಆದೇಶ ನಿರೀಕ್ಷೆ
ವೆಂಕಟೇಶ್ ಅವರು ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೀನಾ, ಬಾಂಗ್ಲಾದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಜತೆಗೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇನ್ನು ಇವರನ್ನು ಮಿಲ್ಟ್ರಿ ಮ್ಯಾನ್ ಎಂತಲೂ ಕರೆಯಲಾಗುತ್ತದೆ. ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್‌ಐ ಪರೀಕ್ಷೆ ಪಡೆದು ಮಿಲಿಟರಿ ಕೋಟಾದಡಿ 2010ರ ಬ್ಯಾಚ್‌ನ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ, ಮತ್ತೆ ಮಂಡ್ಯಕ್ಕೆ ಬಂದು ಸೆಂಟ್ರಲ್ ಠಾಣೆಗೆ ಒಂದೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಇನ್ನು 2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಕಲುಬುರಗಿಯಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಮೊದಲ ನಿಯೋಜನೆ ಕೂಡ ಮಂಡ್ಯದಲ್ಲೇ ಆಗಿದೆ. ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಸಿಕ್ಕಿದೆ. ಅಂತೆಯೇ ಠಾಣೆಯಲ್ಲಿ ಮಂಗಳವಾರ ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ. ಇವರು ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು: ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ

ನಾನು ಮೋದಿಯವರ ಅಭಿಮಾನಿ: ಪ್ರಧಾನಿಯನ್ನು ಕೊಂಡಾಡಿದ ಜಗತ್ತಿನ ನಂ. 1 ಶ್ರೀಮಂತ ಎಲಾನ್​ ಮಸ್ಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fourteen =
Remember me
