ಮಂಗಳೂರು:ಸುರತ್ಕಲ್​ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ನಗರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಇಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು.
ಜುಲೈ 28ರಂದು ಫಾಜಿಲ್ ಮೇಲೆ ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಡಿಸಿಪಿ ಅನ್ಶುಕುಮಾರ್ ನೇತೃತ್ವದಲ್ಲಿ ಏಳೆಂಟು ತಂಡದಲ್ಲಿ ತನಿಖೆ ಮಾಡಲಾಗಿತ್ತು. ಹತ್ಯೆಗೆ ಬಳಸಿದ ಇಯಾನ್ ಕಾರಿನ ಮಾಲೀಕನಿಂದ ಆರೋಪಿಗಳ ಮಾಹಿತಿ ಸಿಕ್ಕಿತು. ಹೆಚ್ಚು ಹಣದಾಸೆಗೆ ಅಜಿತ್ ಕ್ರಾಸ್ತಾ ಕಾರು ನೀಡಿದ್ದ. ಮೂರು ದಿನಕ್ಕೆ ಹದಿನೈದು ಸಾವಿರ ಕೊಡುವುದಾಗಿ ಆರೋಪಿಗಳು ಹೇಳಿದ್ದರು ಎಂದು ಮಾಹಿತಿ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಾದ ಬಜಪೆಯ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಕಾಟಿಪಳ್ಳ ನಿವಾಸಿ ಶ್ರೀನಿವಾಸ್, ಕುಳಾಯಿ ನಿವಾಸಿ ಗಿರಿಧರ್, ಕಾಟಿಪಳ್ಳ ನಿವಾಸಿ ಅಭಿಷೇಕ್ ಮತ್ತು ದೀಕ್ಷಿತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುಹಾಸ್ ಪ್ಲ್ಯಾನ್:ಕೃತ್ಯಕ್ಕೆ ಸುಹಾಸ್ ಶೆಟ್ಟಿ ಮೊದಲು ಅಭಿಷೇಕ್​ನೊಂದಿಗೆ ಯೋಜನೆ ರೂಪಿಸಿದ್ದ, ಅನಂತರ ಉಳಿದವರನ್ನು ಸೇರಿಸಿಕೊಂಡಿದ್ದಾರೆ. ಯಾರಿಗೆ ಹೊಡೆಯುವುದು ಎಂದು ಚರ್ಚಿಸಿದಾಗ ಫಾಜಿಲ್​ಗೆ ಹೊಡೆಯಲು ನಿರ್ಧರಿಸಿದ್ದಾರೆ. ಕೃತ್ಯಕ್ಕೆ ಮೂರು ತಲವಾರುಗಳನ್ನು ಉಪಯೋಗಿಸಿದ್ದಾರೆ. ಕೃತ್ಯ ನಡೆಸಿದ ದಿನ ಫಾಜಿಲ್​ಗಾಗಿ ಜಂಕ್ಷನ್​ನಲ್ಲಿ ಓಡಾಡಿದ್ದರು. ನಂತರ ಅಂಗಡಿ ಬಳಿ ಫಾಜಿಲ್ ಸಿಕ್ಕಾಗ ಆತನ ಮೇಲೆ ಸುಹಾಸ್, ಮೋಹನ್ ಮತ್ತು ಅಭಿಷೇಕ್ ನೇರವಾಗಿ ಕೊಲೆ ನಡೆಸಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − four =
Remember me
