ಬೆಂಗಳೂರು:ನಾಳೆ(ಜ.24) ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
2020ರ ಜನವರಿ 31ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಾಳೆ ಅಂದರೆ 2021ರ ಜನವರಿ 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.
ಪರೀಕ್ಷೆಗೂ ಮುನ್ನಾದಿನ ಅಂದ್ರೆ ಶನಿವಾರವೇ ಭಾನುವಾರ ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದು ಬಂದಿದೆ. ಹಾಗಾಗಿ ಭಾನುವಾರ ನಡೆಯಬೇಕಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಫ್​ಡಿಎ ಪರೀಕ್ಷೆ ನಡೆಯುವ ದಿನಾಂಕವನ್ನು ಮರುನಿಗದಿ ಮಾಡಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

ನನ್ನ ಮನೆಗೆ ನುಗ್ಗಿ ಬಲವಂತವಾಗಿ ಮಗಳಿಗೆ ತಾಳಿ ಕಟ್ಟೇಬಿಟ್ಟ: ಪ್ಲೀಸ್​.. ನನ್ನ ಮಗಳನ್ನು ಕಾಪಾಡಿ…

ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
