ಹುಬ್ಬಳ್ಳಿ/ಚಾಮರಾಜನಗರ:ಕರೊನಾ ಎರಡನೇ ಅಲೆ ಭಯಂಕರವಾಗಿ ಪರಿಣಮಿಸಿದ್ದು, ಹಿರಿಯರು-ಮಧ್ಯವಯಸ್ಕರು, ಬಡವರು-ಪ್ರಭಾವಿಗಳು ಎನ್ನದೆ ಎಲ್ಲರನ್ನೂ ಬಲಿ ಪಡೆಯುತ್ತಲೇ ಇದೆ. ಈ ನಡುವೆ ಸೋಂಕಿನಿಂದ ಗುಣವಾದವರು ಹಲವರಿದ್ದರೂ ಇಲ್ಲಿಬ್ಬರು ಕೋವಿಡ್-19 ಸೋಂಕು ಬಂದಿದ್ದಕ್ಕೇ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರೊನಾ ಪಾಸಿಟಿವ್ ಬಂದಿದ್ದಕ್ಕೆ ಒಬ್ಬರು ನೀರಿಗೆ ಹಾರಿದರೆ ಇನ್ನೊಬ್ಬರು ನೇಣು ಹಾಕಿಕೊಂಡಿದ್ದಾರೆ. ಹುಬ್ಬಳ್ಳಿಯ ಅದರಗುಂಚಿ ಗ್ರಾಮದ ಬಸಮ್ಮ ಸಹದೇವ ಬಳ್ಳೂರ (50) ಕಲ್ಲು‌ಕ್ವಾರಿ ಗುಂಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋವಿಡ್​-19 ಪಾಸಿಟಿವ್ ಎಂದು ದೃಢಪಟ್ಟಿದ್ದಕ್ಕೆ ಹೆದರಿದ ಈಕೆ ಕ್ವಾರಿ ಗುಂಡಿಯಲ್ಲಿ ನಿಂತಿದ್ದ ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸ್ಟೇರಿಂಗ್ ಕಟ್​ ಆಗಿ ಪ್ರಪಾತಕ್ಕೆ ಉರುಳಿ ಬಿದ್ದ ಜೀಪ್; ಒಂದು ಸಾವು, 12 ಮಂದಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ
ಮತ್ತೊಂದೆಡೆ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮೇಲಿಂದ ಮೇಲೆ ಭೀಕರ ಸುದ್ದಿಗಳು ಕೇಳಿಬರುತ್ತಿರುವ ಚಾಮರಾಜನಗರದಲ್ಲಿ ಸೋಂಕಿತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಇಕ್ಕಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ 70 ವರ್ಷದ ಸಿದ್ದಮ್ಮ ಸೋಂಕಿಗೆ ಒಳಗಾಗಿ ಮನೆಯಲ್ಲೇ ಐಸೋಲೇಟ್ ಆಗಿದ್ದರು. ಅದಾಗ್ಯೂ ಸೋಂಕಿನಿಂದ ಆತಂಕಕ್ಕೆ ಒಳಗಾದ ಅವರ ನೇಣು ಹಾಕಿಕೊಂಡಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:ಕರೊನಾ ಸೋಂಕು ನಿಯಂತ್ರಣಕ್ಕಾಗಿ ವಿಧಿಸಲಾಗಿರುವ ಲಾಕ್​ಡೌನ್​ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದಿಂದಾಗಿ ಆಟೋಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಬಡಗುಬೆಟ್ಟು ಬೈಲೂರಿನ ಯತಿರಾಜ್​ (40) ಮನೆಯ ಮಾಡಿನ ಜಂತಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಉಡುಪಿ ಮೀನು ಮಾರುಕಟ್ಟೆ ಬಳಿಯ ಆಟೋ ಸ್ಟ್ಯಾಂಡಿನ ಚಾಲಕ ಆಗಿರುವ ಇವರು ಲಾಕ್​ಡೌನ್​ ತುರ್ತು ಪರಿಸ್ಥಿತಿಯಲ್ಲಿ ದುಡಿಮೆ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:‘ತಂದೆ ಕಾಣೆಯಾಗಿದ್ದಾರೆ, ಹುಡುಕಿಕೊಡಿ ಪ್ಲೀಸ್​.. ಲಾಕ್​ಡೌನ್​ನಿಂದ ಹೊರಗೆ ಹೋಗಲಾಗುತ್ತಿಲ್ಲ, ಸಹಾಯ ಮಾಡಿ: ಪುತ್ರನ ವಿನಂತಿ
ಮದುವೆ ಆಗು ಎಂದು ಒತ್ತಾಯಿಸಿದ ಇಬ್ಬರಿಗೂ ಒಲ್ಲೆ ಎಂದಳು; ಎರಡು ಗುಂಡೇಟಿಗೆ ಹೆಣವಾಗಿ ಉರುಳಿದಳು..!

ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + eighteen =
Remember me
