ವಿಜಯಪುರ: ಬಬಲೇಶ್ವರ ತಾಲೂಕಿನ ಅಡವಿ ಸಂಗಾಪುರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನ ಆತಂಕಗೊಂಡಿದ್ದಾರೆ.ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ಬೆಳಗಿನವರೆಗೂ ಗ್ರಾಮಸ್ಥರು ಜಾಗರಣೆ ನಡೆಸಿದ್ದಾರೆ. ರಾತ್ರಿ ಭಾರೀ ಪ್ರಮಾಣದಲ್ಲಿ ಶಬ್ದ ಕೇಳಿ ಬರುತ್ತಿದ್ದಂತೆ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇದರ ಜೊತೆಗೆ ಕಳೆದ ಮೂರು ದಿನಗಳಿಂದ ಭಾರಿ ಪ್ರಮಾಣದ ಭೂಮಿ ಕಂಪನವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.ಕಂಪನದ ಅನುಭವಕ್ಕೆ ಮನೆಯಲ್ಲಿರುವ ಚಿಕ್ಕ ಮಕ್ಕಳು ಬೆಚ್ಚಿಬಿದ್ದು ಕಣ್ಣೀರು ಹಾಕುತ್ತಿದ್ದಾರೆ. ಅಲ್ಲದೇ, ಮನೆಗಳಲ್ಲಿನ ಸಾಮಗ್ರಿಗಳು ಕೆಳಗೆ ಬಿದ್ದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಾರೀ ಸದ್ದಿಗೆ ಗ್ರಾಮಸ್ಥರು ಕೆಲಕಾಲ ಮನೆಯಿಂದ ಹೊರ ಬಂದು, ಭಯ ಭೀತಿಯಲ್ಲಿ ಹೊರಗಡೆ ನಿಂತುಕೊಂಡು ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.ಇನ್ನಾದ್ರೂ ಘಟನಾ ಸ್ಥಳಕ್ಕೆ ವಿಜಯಪುರ ಭೂ ವಿಜ್ಞಾನಿಗಳ ತಂಡ ಹಾಗೂ ಜಿಲ್ಲಾಡಳಿತದವರು ಭೇಟಿ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + sixteen =
Remember me
